ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

27ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ

ಪರೀಕ್ಷಾ ಕೇಂದ್ರದ ಸುತ್ತಲೂ 144 ನಿಷೇಧಾಜ್ಞೆ ಜಾರಿ; ಜಿಲ್ಲಾಧಿಕಾರಿ
Last Updated 19 ಸೆಪ್ಟೆಂಬರ್ 2020, 16:00 IST
ಅಕ್ಷರ ಗಾತ್ರ

ಯಾದಗಿರಿ: ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳು ಸೆಪ್ಟೆಂಬರ್ 21ರಿಂದ 28ರವರೆಗೆ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 3ಗಂಟೆಯ ವರೆಗೆ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಸುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ 144 ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ರಾಗಪ್ರಿಯಾ ಆರ್., ಆದೇಶಿಸಿದ್ದಾರೆ.

ಜಿಲ್ಲೆಯಲ್ಲಿ 27 ಪರೀಕ್ಷಾ ಕೇಂದ್ರಗಳಿವೆ.ಯಾದಗಿರಿ 12, ಶಹಾಪುರ 7 ಹಾಗೂ ಸುರಪುರ 8 ಪರೀಕ್ಷಾ ಕೇಂದ್ರಗಳಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀಟರ್ ವ್ಯಾಪ್ತಿಯಲ್ಲಿ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ, ಮೊಬೈಲ್, ಪೇಜರ್, ಜಿರಾಕ್ಸ್, ಟೈಪಿಂಗ್ ಹಾಗೂ ಪುಸ್ತಕ ಮಳಿಗೆಗಳಿಗೆ ನಿಷೇಧಿಸಿದೆ.

ಪರೀಕ್ಷಾ ಕೇಂದ್ರಗಳಲ್ಲಿ ನಿಗದಿಪಡಿಸಿದ ಅಧಿಕಾರಿಗಳನ್ನು/ಶಿಕ್ಷಕರನ್ನು ಹೊರತುಪಡಿಸಿ ಇನ್ನೂಳಿದವರಿಗೆ ಪರವಾನಗಿಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದು ನಿಷೇಧಿಸಿದೆ. 200ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಡುವುದನ್ನು ನಿಷೇಧಿಸಿದೆ. ಮದುವೆ, ಶವಸಂಸ್ಕಾರ ಹಾಗೂ ಇನ್ನಿತರ ಧಾರ್ಮಿಕ ಕಾಅರ್ಯಕ್ರಮಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಆರೋಗ್ಯ ಕೌಂಟರ್ ಸ್ಥಾಪಿಸಿ: ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್-19 ಸಾಂಕ್ರಮಿಕ ರೋಗದ ಹಿನ್ನೆಲೆಯಲ್ಲಿ ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲಿ 200 ಮಕ್ಕಳಿಗೆ ಒಬ್ಬರಂತೆ ಆರೋಗ್ಯ ತಪಾಸಣಾ ಕೌಂಟರ್ ಸ್ಥಾಪಿಸಿ ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ಯಾನರ್, ಮಾಸ್ಕ್ ಹಾಗೂ ಪ್ರಥಮ ಚಿಕಿತ್ಸೆ ಪೆಟ್ಟಿಗೆ, ವೈದ್ಯಕೀಯ ಕಿಟ್, ವೈದ್ಯಕೀಯ ಸಿಬ್ಬಂದಿಗಳನ್ನು ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ನೇಮಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಎರಡು ದಿನ ಮುಂಚಿತವಾಗಿ ಸೋಂಕು ನಿವಾರಕ ಔಷಧಿ ಸಿಂಪಡಣೆ ಮಾಡಿ, ವೈರಸ್ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಕೋವಿಡ್-19 ದೃಢಪಟ್ಟಿರುವ ವಿದ್ಯಾರ್ಥಿಗಳು ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡುವಂತೆ ತಿಳಿಸಿದ್ದಾರೆ.

***

ಪರೀಕ್ಷೆಗಳು ಸುಸೂತ್ರವಾಗಿ ನಡೆಸುವ ದೃಷ್ಟಿಯಿಂದ ಜಿಲ್ಲೆಯ ಯಾದಗಿರಿ, ಶಹಾಪುರ, ಸುರಪುರದ ವಿವಿಧಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಲಾಗಿದೆ

– ಡಾ. ರಾಗಪ್ರಿಯಾ ಆರ್., ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT