ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಾರಾಯಣಪುರ | ಇಂಗ್ಲಿಷ್‌ ಪರೀಕ್ಷೆ ಬರೆದ ವಿದ್ಯಾರ್ಥಿಗಳು

Published 6 ಏಪ್ರಿಲ್ 2024, 15:25 IST
Last Updated 6 ಏಪ್ರಿಲ್ 2024, 15:25 IST
ಅಕ್ಷರ ಗಾತ್ರ

ನಾರಾಯಣಪುರ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಶನಿವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ದ್ವಿತೀಯ ಭಾಷೆ ಇಂಗ್ಲಿಷ್‌ ವಿಷಯದ ಪರೀಕ್ಷೆ ಬರೆಯುವ ಮೂಲಕ ವಿದ್ಯಾರ್ಥಿಗಳ ಎಸ್ಸೆಸ್ಸೆಲ್ಸಿ ಹಂತವನ್ನು ಮುಗಿಸಿದರು.

ಪರೀಕ್ಷಾ ಕೇಂದ್ರದ 18 ಕೊಠಡಿಗಳು, ಗ್ಯಾಲರಿ, ಪ್ರಶ್ನೆಪತ್ರಿಕೆ ಕೊಠಡಿಗಳಿಗೆ ಸಿಸಿ ಟಿವಿ ಕಣ್ಗಾವಲಿನಲ್ಲಿ, ನೇರಪ್ರಸಾರದ ವ್ಯವಸ್ಥೆ ಮಾಡಲಾಗಿತ್ತು.

ಒಟ್ಟಾರೆ ಎಲ್ಲ ವಿಷಯದ ಪರೀಕ್ಷೆಗಳು ಸೂಸುತ್ರವಾಗಿ ನಡೆದಿದ್ದು, ಸದ್ಯ ಪರೀಕ್ಷೆ ಮುಗಿಸಿರುವ ವಿದ್ಯಾರ್ಥಿಗಳು ಹಾಗೂ ಪಾಲಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ದ್ವಿತೀಯ ಭಾಷೆ ಇಂಗ್ಲಿಷ್‌ ವಿಷಯದ ಪರೀಕ್ಷೆಗೆ 411 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 403 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದರೆ 8 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕ ಸಂಗಯ್ಯ ಬಿಕ್ಷಾವತಿಮಠ ತಿಳಿಸಿದ್ದಾರೆ.

ಸ್ಥಾನಿಕ ಜಾಗೃತದಳದ ಶಿವಪ್ಪ ಪೂಜಾರಿ, ಜಂಟಿ ಅಧೀಕ್ಷಕ ಮಹಾದೇವಪ್ಪ ಹಂದ್ರಾಳ, ಪ್ರಶ್ನೆಪತ್ರಿಕೆ ಪಾಲಕ ಮಾನಪ್ಪ ಸತ್ಯ, ರಫೀಕ್, ವೀಕ್ಷಕರಾದ ವಿಜಯಕುಮಾರ ಅರಳಿ, ಸಿಆರ್ಪಿ ಮೌನೇಶ, ವಿಜಯಕುಮಾರ ಪಾಟೀಲ ಹಾಜರಿದ್ದರು.

ಸ್ಥಳೀಯ ಪೊಲೀಸ್‌ ಠಾಣೆಯ ಪಿಎಸ್‌ಐ ಬಸವರಾಜ ಕೋಟೆ ಅವರ ನೇತೃತ್ವದಲ್ಲಿ ಎಎಸ್‌ಐ ಬಾಬು ರಾಠೋಡ, ಎಚ್‌ಸಿಗಳಾದ ಸಂಗಪ್ಪ ಮೇಲಿನಮನಿ, ಪ್ರಕಾಶ ಸೇರಿದಂತೆ ಪೊಲೀಸ್ ಸಿಬ್ಬಂದಿ ಕೇಂದ್ರಕ್ಕೆ ಸೂಕ್ತ ಬಂದೋಬಸ್ತ್ ಒದಗಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT