ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ: ಕನ್ನಡ ಪರೀಕ್ಷೆಗೆ 760 ಮಂದಿ ಗೈರು

Last Updated 21 ಮಾರ್ಚ್ 2019, 14:45 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯ 54 ಪರೀಕ್ಷಾ ಕೇಂದ್ರಗಳಲ್ಲಿ ಗುರುವಾರ ಆರಂಭಗೊಂಡ ಎಸ್ಸೆಸ್ಸೆಲ್ಸಿ ಕನ್ನಡ ಪರೀಕ್ಷೆಗೆ ಒಟ್ಟು 760 ಮಂದಿ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. 14,176 ಮಂದಿ ಹೆಸರು ನೋಂದಾಯಿಸಿಕೊಂಡಿದ್ದು, ಅವರಲ್ಲಿ ಒಟ್ಟು 13,416 ಮಂದಿ ಮಾತ್ರ ಪರೀಕ್ಷೆ ಎದುರಿಸಿದ್ದಾರೆ.

ಶಹಾಪುರ ತಾಲ್ಲೂಕಿನಲ್ಲಿ 3,387 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು,ಅವರಲ್ಲಿ 3,737 ವಿದ್ಯಾರ್ಥಿಗಳು ಹಾಜರಾಗಿದ್ದರು. 109 ವಿದ್ಯಾರ್ಥಿನಿಯರು, 41 ಮಂದಿ ಗಂಡುಮಕ್ಕಳು ಸೇರಿದಂತೆ 150 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಅದೇ ರೀತಿಯಲ್ಲಿ ಸುರಪುರ ತಾಲ್ಲೂಕಿನಲ್ಲಿ 4,519 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿ ಕೊಂಡಿದ್ದರು. ಅವರಲ್ಲಿ 4,299 ಮಂದಿ ಪರೀಕ್ಷೆ ಎದುರಿಸಿದ್ದಾರೆ. 139 ಹೆಣ್ಣು, 81 ಗಂಡು ಮಕ್ಕಳು ಸೇರಿ ಒಟ್ಟು 220 ವಿದ್ಯಾರ್ಥಿಗಳು ಪರೀಕ್ಷೆ ಬರೆದಿಲ್ಲ.

ಯಾದಗಿರಿಯ ತಾಲ್ಲೂಕಿನಲ್ಲಿ 5,570 ಮಂದಿ ಹೆಸರು ನೋಂದಾಯಿಸಿಕೊಂಡಿದ್ದರು. ಅವರರಲ್ಲಿ 5,380 ಮಂದಿ ಹಾಜರಾಗಿದ್ದರು. 310 ಹೆಣ್ಣು, 80 ಗಂಡು ಸೇರಿ 350 ಮಂದಿ ವಿದ್ಯಾರ್ಥಿಗಳು ಪರೀಕ್ಷೆಯಿಂದ ಹೊರಗುಳಿದಿದ್ದಾರೆ. ಒಟ್ಟು ‘ಶಹಾಪುರದಲ್ಲಿ-16, ಸುರಪುರದಲ್ಲಿ-16 ಹಾಗೂ ಯಾದಗಿರಿಯಲ್ಲಿ-22 ಸೇರಿದಂತೆ ಒಟ್ಟು 54 ಪರೀಕ್ಷಾ ಕೇಂದ್ರಗಳಿದ್ದು, ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಿಗಿಭದ್ರತೆ, ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಮೂಲಸೌಕರ್ಯ ಕಲ್ಪಿಸಲಾಗಿತ್ತು. 10 ಹೊಸ ಪರೀಕ್ಷಾ ಕೇಂದ್ರಗಳನ್ನು ಹೆಚ್ಚಳ ಮಾಡಲಾಗಿತ್ತು’ ಎಂದು ಡಿಡಿಪಿಐ ಶ್ರೀಶೈಲ ಆರಾಧ್ಯ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT