ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯರಗೋಳ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನಕಲು: ಶಿಕ್ಷಕಿಗೆ ನೋಟಿಸ್‌

Published 26 ಮಾರ್ಚ್ 2024, 15:51 IST
Last Updated 26 ಮಾರ್ಚ್ 2024, 15:51 IST
ಅಕ್ಷರ ಗಾತ್ರ

ಯರಗೋಳ: ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೋಮವಾರ ಎಸ್ಸೆಸ್ಸೆಲ್ಸಿಯ ಕನ್ನಡ ಪರೀಕ್ಷೆ ನಡೆಯುತ್ತಿದ್ದ ವೇಳೆ ಪರೀಕ್ಷೆ ಕೇಂದ್ರದ ಕೋಣೆ ಸಂಖ್ಯೆ 3ರಲ್ಲಿ ವಿದ್ಯಾರ್ಥಿಗಳು ನಕಲು ಮಾಡುತ್ತಿರುವುದು ಕಂಡು ಬಂದಿದ್ದು, ಈ ಸಂಬಂಧ ಶಿಕ್ಷಕಿಗೆ ನೋಟಿಸ್‌ ನೀಡಲಾಗಿದೆ. 

ಯಾದಗಿರಿಯ ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ಸಿಸಿ ಕ್ಯಾಮೆರಾ ವೀಕ್ಷಣೆ ಮಾಡಿದಾಗ ನಕಲು ನಡೆದಿರುವುದು ಬೆಳಕಿಗೆ ಬಂದಿದೆ.

ಪರೀಕ್ಷೆ ಕೋಣೆಯ ಮೇಲ್ವಿಚಾರಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕಿ ಯಲ್ಲಮ್ಮ ಯಾವುದೇ ಕ್ರಮ ಕೈಗೊಂಡಿಲ್ಲ. ಮುಖ್ಯ ಅಧೀಕ್ಷಕರ ಗಮನಕ್ಕೆ ತರದೆ ಕರ್ತವ್ಯ ಲೋಪ ಎಸಗಿರುವುದು ವೆಬ್ ಕಾಸ್ಟಿಂಗ್ ಸಿಸಿ ಟಿವಿ ಕ್ಯಾಮೆರಾದಲ್ಲಿ ಕಂಡು ಬಂದಿದೆ. ಹಾಗಾಗಿ 3 ದಿನಗಳಲ್ಲಿ ಉತ್ತರಿಸುವಂತೆ ಶಿಕ್ಷಕಿಗೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ನೋಟಿಸ್ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT