ಯಾದಗಿರಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯು ಇದೇ ಮಾರ್ಚ್ 31 ರಿಂದ ಏಪ್ರಿಲ್ 15 ರ ವರೆಗೆ ನಡೆಯಲಿದ್ದು, 68 ಪರೀಕ್ಷಾ ಕೇಂದ್ರಗಳಲ್ಲಿ 17,249 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. 8,890 ಬಾಲಕರು ಹಾಗೂ 8,359 ಬಾಲಕಿಯರು ಹಾಗೂ ಖಾಸಗಿ ಅಭ್ಯರ್ಥಿಗಳು 1,035 ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.
ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶದಲ್ಲಿ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಸುರಕ್ಷತೆಗೆ ಪೊಲೀಸ್ ಬಂದೋಬಸ್ತ್‌ಗಾಗಿ ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ 24 ಮಾರ್ಗಾಧಿಕಾರಿ, ಪ್ರತಿ 4-5 ಕೇಂದ್ರಗಳಿಗೆ ಒಂದು ವಿಚಕ್ಷಣಾ ದಳ ತಂಡ, ಜಿಲ್ಲಾ ಮಟ್ಟದ 3 ಜಾಗೃತ ದಳ, 68 ಮುಖ್ಯ ಅಧೀಕ್ಷಕರು, ಮೊಬೈಲ್ ಸ್ವಾಧೀನ ಅಧಿಕಾರಿಗಳು, ಈ ಬಾರಿ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ತಲಾ ಒಬ್ಬರಂತೆ 68 ಪ್ರಶ್ನೆ ಪತ್ರಿಕೆಗಳ ಪಾಲಕರನ್ನು ನೇಮಿಸಲಾಗಿದೆ.
ಪಾಲಕರ ಜೊತೆ ಆಗಮಿಸುವ ವಿದ್ಯಾರ್ಥಿಗಳು:
ಮಾರ್ಚ್ 31 ರಂದು ಪ್ರಥಮ ಭಾಷೆ ಪರೀಕ್ಷೆ ಇದ್ದು, ವಿದ್ಯಾರ್ಥಿಗಳು ಪಾಲಕರೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಆಗಮಿಸುತ್ತಿದ್ದಾರೆ. ವಿದ್ಯಾರ್ಥಿಗಳನ್ನು ತಪಾಸಣೆ ಮಾಡಿ ಕೋಣೆಯೊಳಗೆ ಬಿಡಲಾಗುತ್ತಿದೆ.
*
ಪರೀಕ್ಷಾ ಕೇಂದ್ರಗಳ ವಿವರ
ತಾಲ್ಲೂಕು; ಪರೀಕ್ಷಾ ಕೇಂದ್ರಗಳು
ಶಹಾಪುರ; 21
ಸುರಪುರ; 18
ಯಾದಗಿರಿ; 29
ಒಟ್ಟು; 68
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.