ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಫಲಿತಾಂಶ: 34ನೇ ಸ್ಥಾನದಿಂದ ಮೇಲೇಳುತ್ತಾ ಜಿಲ್ಲೆ?

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ ಇಂದು, ಶೇಕಡವಾರು ಹೆಚ್ಚಳದ ನಿರೀಕ್ಷೆ
Last Updated 9 ಆಗಸ್ಟ್ 2020, 16:31 IST
ಅಕ್ಷರ ಗಾತ್ರ

ಯಾದಗಿರಿ: ಎಸ್ಸೆಸ್ಸೆಲ್ಸಿ ಫಲಿತಾಂಶ ಆಗಸ್ಟ್‌ 10 ರಂದು ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ. ಕಳೆದ ವರ್ಷ ಶೈಕ್ಷಣಿಕ ಜಿಲ್ಲೆಗಳ ಪೈಕಿ ಯಾದಗಿರಿ ಜಿಲ್ಲೆ 34ನೇ ಸ್ಥಾನದಲ್ಲಿ ಇತ್ತು. ಈ ವರ್ಷ ಯಾವ ಸ್ಥಾನಕ್ಕೆ ಏರಲಿದೆ ಎನ್ನುವುದು ಕುತೂಹಲ ಮೂಡಿಸಿದೆ.

2018–19ರಲ್ಲಿ ಜಿಲ್ಲೆಯ 136 ಸರ್ಕಾರಿ ಶಾಲೆಗಳಲ್ಲಿ 8,572 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 2019–20ರಲ್ಲಿ 17,396 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.ಈ ಮುಂಚೆಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಮಾರ್ಚ್ 27ರಿಂದ ಏಪ್ರಿಲ್ 9ರವರೆಗೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಕೋವಿಡ್‌ ಕಾರಣದಿಂದ ಮುಂದೂಡಲಾಗಿತ್ತು. ಜೂನ್‌ 25ರಿಂದ ಜುಲೈ 4 ರವರೆಗೆ ಪರೀಕ್ಷೆ ನಡೆದಿತ್ತು.

ಜಿಲ್ಲೆಯ ವಿದ್ಯಾರ್ಥಿಗಳು ಅಲ್ಲದೆ ಬೇರೆ ಜಿಲ್ಲೆಯಲ್ಲಿ ಅಭ್ಯಾಸ ಮಾಡಿದ ವಿದ್ಯಾರ್ಥಿಗಳಿಗೆ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಬೇರೆ ಜಿಲ್ಲೆಗಳಲ್ಲಿ ಓದಿದಜಿಲ್ಲೆಯ 456 ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು.

ವಿಶೇಷ ತರಗತಿ: ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರತಿ ಬಾರಿ ಕಳಪೆ ಸಾಧನೆ ಬರುವುದನ್ನು ತಡೆಯುವ ಉದ್ದೇಶದಿಂದ ವಿಶೇಷ ತರಗತಿಗಳನ್ನು ನಡೆಸಲಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

‘ಫಲಿತಾಂಶ ಹೆಚ್ಚಳಕ್ಕೆ ಜನವರಿಯಿಂದ ಮಾರ್ಚ್‌ 23ರ ವರೆಗೆ ಬೆಳಿಗ್ಗೆ ಮತ್ತು ಸಂಜೆ ವೇಳೆ ವಿಶೇಷ ತರಗತಿಗಳನ್ನು ಮಾಡಲಾಗಿದೆ. ಇದಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ ಅವರು ಸೂಕ್ತ ಮಾರ್ಗದರ್ಶನ ನೀಡಿದ್ದಾರೆ. ಗಣಿತ, ಇಂಗ್ಲಿಷ್, ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆನಮ್ಮ ಶಿಕ್ಷಕರು ಪಾಠ ಮಾಡಿದ್ದಾರೆ. ಬೇರೆ ಕಡೆಯಿಂದ ಸಂಪನ್ಮೂಲ ವ್ಯಕ್ತಿಗಳನ್ನು ಕರೆತಂದು ಉಪನ್ಯಾಸ ನೀಡಲಾಗಿದೆ. ಕೋವಿಡ್‌ ಕಾರಣದಿಂದ ಮಾರ್ಚ್‌ ತಿಂಗಳಲ್ಲಿ ಸಮಸ್ಯೆ ಆಗಿದೆ’ಎನ್ನುತ್ತಾರೆಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ ರೆಡ್ಡಿ ಅವರು.

‘ನಗರ ಪ್ರದೇಶ, ಹಳ್ಳಿಗಳಲ್ಲಿ ಫಲಿತಾಂಶ ಹೆಚ್ಚಳಕ್ಕೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಾರ್ಯರೂಪಕ್ಕೆ ತರಲಾಗಿದೆ. ಎಲ್ಲಿಯೂ ನಕಲು ಮಾಡಲು ಅವಕಾಶ ನೀಡದೆ ಕಟ್ಟುನಿಟ್ಟಾಗಿ ವ್ಯವಸ್ಥೆ ಮಾಡಲಾಗಿತ್ತು. ನಮ್ಮಲ್ಲಿ ಕಾಯಂ ಶಿಕ್ಷಕರ ಕೊರತೆ ಇದೆ. ಅತಿಥಿ ಶಿಕ್ಷಕರ ಸಂಪೂರ್ಣ ಸಹಕಾರದಿಂದ ಪಾಠ ಮಾಡಲಾಗಿದೆ. ವೇತನವೂ ನೀಡಲಾಗಿದೆ’ ಎನ್ನುತ್ತಾರೆ ಅವರು.

ಕೋವಿಡ್‌ ಕಾಲದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದು ಸೂಕ್ತವಲ್ಲ ಎಂದು ಕೆಲ ಪೋಷಕರು ಪರೀಕ್ಷೆಗೆ ವಿರೋಧ ವ್ಯಕ್ತಪಡಿಸಿದ್ದರು. ಸರ್ಕಾರ ಅಗತ್ಯ ಕ್ರಮ ಕೈಗೊಂಡು ಪರೀಕ್ಷೆ ನಡೆಸಿತ್ತು.

***

ಈ ಬಾರಿ ಜಿಲ್ಲೆ ಯಾವ ಸ್ಥಾನದಲ್ಲಿರುತ್ತದೆ ಎಂದುಹೇಳಲು ಸಾಧ್ಯವಿಲ್ಲ. ಆದರೆ, ಶೇಕಡಾವಾರು ಮಾತ್ರ ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಾಗಲಿದೆ ಎನ್ನುವ ನಿರೀಕ್ಷೆ ಇದೆ
ಶ್ರೀನಿವಾಸ ರೆಡ್ಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT