ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಅಂಗನವಾಡಿಯಲ್ಲಿ ಪೂರ್ವ ಪ್ರಾಥಮಿಕ ಶಾಲೆ ಆರಂಭಿಸಿ’

Published 19 ಜೂನ್ 2024, 15:42 IST
Last Updated 19 ಜೂನ್ 2024, 15:42 IST
ಅಕ್ಷರ ಗಾತ್ರ

ಶಹಾಪುರ: ತಾಲ್ಲೂಕಿನ ಅಂಗನವಾಡಿ ಕೇಂದ್ರದಲ್ಲಿ ಪೂರ್ವ ಪ್ರಾಥಮಿಕ( ಎಲ್ ಕೆಜಿ, ಯುಕೆಜಿ) ಆರಂಭಿಸಬೇಕು. ಸರ್ಕಾರ ಸರ್ಕಾರಿ ಶಾಲೆಗಲ್ಲಿ ಆರಂಭಿಸಲು ಉದ್ದೇಶಿಸಿರುವ ಪೂರ್ವ ಪ್ರಾಥಮಿಕ ಶಾಲೆ ಆರಂಭವನ್ನು ತಡೆಹಿಡಿಯಬೇಕು ಎಂದು ಆಗ್ರಹಿಸಿ ಬುಧವಾರ ನಗರದ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರ ಗೃಹ ಕಚೇರಿಯ ಮುಂದುಗಡೆ ಅಂಗನವಾಡಿ ನೌಕರರ ಸಂಘದ ಸದಸ್ಯರು ಧರಣಿ ನಡೆಸಿದರು.

ಪ್ರಸಕ್ತ ವರ್ಷ ಸರ್ಕಾರ ಹಲವು ನೀತಿಗಳನ್ನು ರೂಪಿಸಿ ಅಂಗನವಾಡಿ ನೌಕರರನ್ನು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಕ್ರಮೇಣ ಅಂಗನವಾಡಿ ಕೇಂದ್ರಗಳನ್ನು ಮುಚ್ಚಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಧರಣಿನಿರತರು ದೂರಿದರು.

ಶಿಕ್ಷಣ, ವೈದ್ಯಕೀಯ ಸೌಲಭ್ಯ, ಆಹಾರದ ಹಕ್ಕು ಕಲ್ಪಿಸಿಕೊಡುವುದು ಸರ್ಕಾರದ ಮೊದಲ ಆದ್ಯತೆಯ ಕೆಲಸವಾಗಬೇಕು.ಅಂಗನವಾಡಿ ಕೇಂದ್ರಗಳ ಮೇಲೆ ನೂರಾರು ಬಡವರು ಅವಲಂಬಿತರಾಗಿದ್ದಾರೆ. ಒಂದುವೇಳೆ ಅವುಗಳನ್ನು ಮುಚ್ಚಿದರೆ ಲಕ್ಷಾಂತರ ಮಂದಿಗೆ ತೊಂದರೆಯಾಗುತ್ತದೆ ಎಂಬ ಕನಿಷ್ಠ ಪ್ರಜ್ಞೆಯೂ ಕೇಂದ್ರ ಸರ್ಕಾರಕ್ಕೆ ಇಲ್ಲ.ಮಕ್ಕಳ ಪಾಲನೆ ಪೋಷಣೆ ಹಾಗೂ ಶಿಕ್ಷಣದ ಜೊತೆ ಪೌಷ್ಟಿಕತೆ ಬಗ್ಗೆ ಕಾಳಜಿ ವಹಿಸುತ್ತಾ ಬಂದಿದ್ದಾರೆ. ದೇಶದ ಪ್ರಗತಿಗೆ ಪೂರಕವಾಗಿ ಅಂಗನವಾಡಿ ನೌಕರರು ಕೆಲಸ ನಿರ್ವಹಿಸುತ್ತಾ ಬಂದಿದ್ದಾರೆ ಎಂದು ಸಿಐಟಿಯು ತಾಲೂಕ ಸಂಚಾಲಕ ಮಲ್ಲಯ್ಯ ಪೋಲಂಪಲ್ಲಿ ತಿಳಿಸಿದರು.

ಅಂಗನವಾಡಿ ನೌಕರರ ಸಂಘದ ಮುಖಂಡರಾದ ಅನಿತಾ ಹಿರೇಮಠ, ಬಸಲಿಂಗಮ್ಮ ನಾಟೇಕರ್, ನಸೀಮಾ ಸುರಪುರ, ಯಮನಮ್ಮ ದೋರನಹಳ್ಳಿ, ಬಸಮ್ಮ ಸುರಪುರ, ಕವಿತಾ ಗುರುಮಿಟ್ಕಲ್, ರಾಧಾ, ರೇಣುಕಾ ಗೋಗಿ, ಲಕ್ಷ್ಮೀ, ಮಹಾದೇವಿ, ಮಹಾನಂದಾ, ಸಂಪತ ಕುಮಾರಿ, ಅನ್ನಪೂರ್ಣ,, ಮಂಜುಳಾ, ಲಕ್ಷ್ಮಿ ಗೋಗಿ, ಶಾರದಾ ನಂದಿಹಳ್ಳಿ, ವಿಜಯಲಕ್ಷ್ಮಿ, ರಾಜಲಕ್ಷ್ಮಿ, ಮರಲಿಂಗಮ್ಮ, ಸಿರಿದೇವಿ ಸರಸ್ವತಿ, ಬಸಲಿಂಗಮ್ಮ, ಮಲ್ಲಮ್ಮ, ಪರ್ವಿನ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT