ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರಿಗೆ ಕೇಂದ್ರದ ಮಾದರಿ ವೇತನಕ್ಕೆ ಹೋರಾಟ: ಷಡಾಕ್ಷರಿ

ಜಿಲ್ಲಾ ಮಟ್ಟದ ಶೈಕ್ಷಣಿಕ ಕಾರ್ಯಾಗಾರದಲ್ಲಿ ಸರ್ಕಾರಿ ನೌಕರರ ಸಂಘದ ಷಡಾಕ್ಷರಿ ಹೇಳಿಕೆ
Last Updated 19 ಜನವರಿ 2021, 2:33 IST
ಅಕ್ಷರ ಗಾತ್ರ

ಯಾದಗಿರಿ: ‘ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಶಿಕ್ಷಕರಿಗೆ ಕೇಂದ್ರ ಸರ್ಕಾರದ ಮಾದರಿ ವೇತನ ನೀಡಲಾಗುತ್ತಿದೆ. ಆದರೆ, ರಾಜ್ಯದಲ್ಲಿ ಮಾತ್ರ ರಾಜ್ಯದ ವೇತನ ನೀಡಲಾಗುತ್ತಿದೆ. ಇದನ್ನು ಬದಲಾಯಿಸಲು ಹೋರಾಟ ಮಾಡಲಾಗುವುದು’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಹೇಳಿದರು.

ನಗರದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಶೈಕ್ಷಣಿಕ ಕಾರ್ಯಾಗಾರ ಹಾಗೂ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ₹20ರಿಂದ ₹40 ಸಾವಿರ ವೇತನ ಇದೆ. ಕೇಂದ್ರ ಮಾದರಿ ಜಾರಿಯಾದರೆ ನೌಕರರಿಗೆ ಹಲವಾರು ರೀತಿಯಿಂದ ಉಪಯೋಗವಾಗಲಿದೆ. ಹೀಗಾಗಿ ಇದನ್ನು ಜಾರಿಗೆ ತರಲು ಹೋರಾಟ ಮಾಡಲಾಗುವುದು’ ಎಂದು ಪ್ರಕಟಿಸಿದರು.

‘ಈಚೆಗೆ ಸಭೆ ಸೇರಿದಾಗ ವಿವಿಧ ಇಲಾಖೆಗಳ ನೌಕರರು ಬೆಂಬಲ ನೀಡುತ್ತೇವೆ ಎಂದು ತಿಳಿಸಿದ್ದಾರೆ. ಹೀಗಾಗಿ ನಾವು ನಮ್ಮ ಬೇಡಿಕೆ ಈಡೇರಿಕೆಗಾಗಿ ಯಾವುದೇ ಹೋರಾಟಕ್ಕೂ ಸಿದ್ಧರಿದ್ದೇವೆ’ ಎಂದು ತಿಳಿಸಿದರು.

ಎನ್‌ಪಿಎಸ್‌ ರದ್ದು ಮಾಡಬೇಕು:‘ಎನ್‌ಪಿಎಸ್‌ ಪಿಂಚಣಿ ವ್ಯವಸ್ಥೆ ಕೈ ಬಿಡಬೇಕು. ಹಳೆ ಪಿಂಚಣಿ ಪದ್ಧತಿ ಜಾರಿಗೊಳಿಸಬೇಕು. ಸರ್ಕಾರ ನೌಕರರ ವೇತನದಲ್ಲಿ ಕೋವಿಡ್‌ ಸಂದರ್ಭದಲ್ಲಿ ಶೇ 40ರಷ್ಟು ವೇತನ ಕಡಿಮೆ ಮಾಡುತ್ತೇವೆ ಎಂದು ತಿಳಿಸಿದ್ದರು. ಆದರೆ, ನಾವು ಇದಕ್ಕೆ ಒಪ್ಪಲಿಲ್ಲ. ಇದರಿಂದ ವೇತನ ಕಡಿತವಾಗಿಲ್ಲ. ಹಲವಾರು ತಿಂಗಳಿಂದ ತುಟ್ಟಿಭತ್ಯೆ ತಡೆಹಿಡಿದಿದ್ದಾರೆ. ಇದು ಬಿಡುಗಡೆಯಾಗಬೇಕು. ಇದು ನಮ್ಮ ಒತ್ತಾಯವಾಗಿದೆ. ಎನ್‌ಪಿಎಸ್‌ ರದ್ದು ಮಾಡಬೇಕು. ಇದಕ್ಕಾಗಿ ಹೋರಾಟ ಮಾಡುತ್ತೇವೆ. ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ವೇತನ ತಾರತಮ್ಯ, ಬಿಆರ್‌ಪಿ, ಸಿಆರ್‌ಪಿ, ಶಿಕ್ಷಕರ ವರ್ಗಾವಣೆ ನಿಂತಿದೆ. ಇವೆಲ್ಲವಕ್ಕೂ ಒಂದು ವರ್ಷದಲ್ಲಿ ಇತಿಶ್ರೀ ಹಾಡುತ್ತೇವೆ’ ಎಂದರು.

ಸರ್ಕಾರಿ ನೌಕರರ ಸಂಘ ಮಹಾಪ್ರಧಾನ ಕಾರ್ಯದರ್ಶಿ ಜಗದೀಶ ಗೌಡಪ್ಪ ಪಾಟೀಲ, ರಾಜ್ಯ ‍ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಪಿ.ಟಿ.ಕಾಮನಹಳ್ಳಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಂಭುಲಿಂಗನಗೌಡ ಮಾತನಾಡಿದರು.

ನೌಕರರ ಸಂಘದ ಉಪಾಧ್ಯಕ್ಷ ಮಲ್ಲಿಕಾರ್ಜನ ಬಳ್ಳಾರಿ, ಕಲಬುರ್ಗಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜು ಲೆಂಗಟಿ, ಬೀದರ್ ನೌಕರರ ಸಂಘದ ಅಧ್ಯಕ್ಷ ರಾಜೇಂದ್ರ ಕುಮಾರ ಗಂದಗೆ, ಕಲಬುರ್ಗಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಯ್ಯ ಗುತ್ತೇದಾರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಹಿಪಾಲರೆಡ್ಡಿ ಮಾಲಿಪಾಟೀಲ, ಗೌರವಾಧ್ಯಕ್ಷ ರಾಚನಗೌಡ, ಕೋಶಾಧ್ಯಕ್ಷ ಯಾಮರೆಡ್ಡಿ, ಪ್ರಧಾನ ಕಾರ್ಯದರ್ಶಿ ಆರ್‌.ಎಂ.ನಾಟೇಕರ, ವಿವಿಧ ತಾಲ್ಲೂಕು ಘಟಕದ ಅಧ್ಯಕ್ಷರು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರಾಘವೇಂದ್ರ ಅಳ್ಳಳ್ಳಿ, ಉಪಾಧ್ಯಕ್ಷರಾದ ಪಂಪನಗೌಡ ಪಾಟೀಲ, ಸುವರ್ಣ ದೊಡ್ಡಮನಿ, ಪ್ರಧಾನ ಕಾರ್ಯದರ್ಶಿ ಜಗದೀಶ ಗೋಟ್ಲಾ ಸೇರಿದಂತೆ ವಿವಿಧ ತಾಲ್ಲೂಕು ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಶಿಕ್ಷಕರು, ಸರ್ಕಾರಿ ನೌಕರರು ಇದ್ದರು.

‘ಪ್ರತ್ಯೇಕ ಸಚಿವ, ಮುಖ್ಯಮಂತ್ರಿಯಾದರೂ ಶಿಕ್ಷಕರ ಸಮಸ್ಯೆ ಪರಿಹಾರವಾಗಲ್ಲ’
ರಾಜ್ಯದಲ್ಲಿ ಶಿಕ್ಷಕರ ಸಮಸ್ಯೆಗಳು ಹೆಚ್ಚಾಗಿವೆ. ಇದಕ್ಕಾಗಿ ಪ್ರತ್ಯೇಕ ಸಚಿವ, ಮುಖ್ಯಮಂತ್ರಿಯನ್ನು ನೇಮಿಸಿದರೂ ಪರಿಹಾರ ಕಾಣಲಾರದಷ್ಟು ಶಿಕ್ಷಕರ ಸಮಸ್ಯೆಗಳು ಜಟಿಲವಾಗಿವೆ. ಇದಕ್ಕಾಗಿ ಒಂದೇ ಸಂಘಟನೆಯಲ್ಲಿ ಇದ್ದರೆ ಮಾತ್ರ ಪರಿಹಾರ ಕಾಣಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಅಭಿಪ್ರಾಯಿಸಿದರು.

ರಾಜ್ಯದಲ್ಲಿ ಶಿಕ್ಷಕರ ಸಂಘಟನೆಗಳು ಕಾಲಿಗೊಂದು, ಕೈಗೊಂದು ಹುಟ್ಟಿಕೊಂಡಿವೆ. ಇದು ನಮ್ಮನಮ್ಮಲ್ಲಿ ಒಡೆದು ಆಳುವ ನೀತಿ ತೋರಿಸುತ್ತಿವೆ. ಒಬ್ಬರು ಒಂದು ಬೇಕೆಂದರೆ ಮತ್ತೊಬ್ಬರು ಬೇಡ ಎನ್ನುತ್ತಾರೆ. ಇದರಿಂದ ಶಿಕ್ಷಕರ ಸಮಸ್ಯೆಗಳು ಪರಿಹಾರವಾಗುವುದಿಲ್ಲ. ಬದಲಾಗಿ ಸರ್ಕಾರಕ್ಕೆ ನಾವೇ ಅನ್ಯಮಾರ್ಗ ತೋರಿಸಿದಂತೆ ಆಗುತ್ತದೆ. ಹೀಗಾಗಿ ಒಂದೇ ಸಂಘಟನೆಯಲ್ಲಿ ಎಲ್ಲರೂ ತೋಡಗಿಸಿಕೊಂಡರೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಸಲಹೆ ನೀಡಿದರು.

***

ರಾಜ್ಯ ಸರ್ಕಾರದಿಂದ ಏಪ್ರಿಲ್‌ 21ರಂದು ಸರ್ಕಾರಿ ನೌಕರರ ದಿನಾಚರಣೆ ಮಾಡಲು ತೀರ್ಮಾನಿಸಿದೆ. ಇದಕ್ಕೆ ಸಹಮತವಿದೆ.
-ಸಿ.ಎಸ್‌.ಷಡಾಕ್ಷರಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT