ಬಾಲಕಿ ಅತ್ಯಾಚಾರ ಖಂಡಿಸಿ ಪ್ರತಿಭಟನೆ

7

ಬಾಲಕಿ ಅತ್ಯಾಚಾರ ಖಂಡಿಸಿ ಪ್ರತಿಭಟನೆ

Published:
Updated:
Deccan Herald

ಯಾದಗಿರಿ:ಕೋಲಾರ ಜಿಲ್ಲೆ, ಮಾಲೂರಿನಲ್ಲಿ ಬಾಲಕಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಶನಿವಾರ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್(ಎಐಡಿಎಸ್‌ಒ) ಸಮಿತಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿತು.

ಎಐಡಿಎಸ್‌ಒ ಸಮಿತಿ ಸದಸ್ಯೆ ಸಿಂಧೂ ಮಾತನಾಡಿ,‘ಬಾಲಕಿಯ ಸಾವಿಗೆ ಕಾರಣರಾಗಿರುವ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಬೇಕು. ಇಂಥಾ ಕೃತ್ಯಗಳಿಗೆ ಪ್ರೇರಣೆ ಆಗುತ್ತಿರುಬವ ಅಶ್ಲೀಲ ಅಂತರ್ಜಾಲತಾಣ, ಸಿನಿಮಾ, ವಿಡಿಯೊಗಳನ್ನು ನಿಷೇಧಿಸಬೇಕು’ ಎಂದು ಆಗ್ರಹಿಸಿದರು.

ಎಐಡಿಎಸ್‌ಒ ಅಧ್ಯಕ್ಷ ರಾಮಲಿಂಗಪ್ಪ ಮಾತನಾಡಿ,‘ಹೆಣ್ಣುಮಕ್ಕಳಿಗೆ ಭದ್ರತೆ ಖಾತ್ರಿಪಡಿಸುವುದು ಸರ್ಕಾರಗಳ ಮುಖ್ಯ ಆದ್ಯತೆಯಾಗಬೇಕು. ಅಲ್ಲಿನ ಸ್ಥಳೀಯ ಜಿಲ್ಲಾಡಳಿತ, ಸರ್ಕಾರ, ಪೊಲೀಸ್ ವ್ಯವಸ್ಥೆಯ ಬಲಹೀನತೆಯಿಂದಾಗಿ ರಾಜ್ಯದಲ್ಲಿ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಇದಕ್ಕೆ ಸರ್ಕಾರವೇ ನೇರ ಹೊಣೆ ಹೊರಬೇಕು. ಇಲ್ಲವೇ ಕೋಲಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಕಾರಿಯ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಎಐಡಿಎಸ್‌ಒ ಕಾರ್ಯದರ್ಶಿ ಎಚ್.ಪಿಸೈದಪ್ಪ , ಎಐಡಿಎಸ್‌ಒ ಸಹ ಕಾರ್ಯದರ್ಶಿ ಸುಭಾಷಚಂದ, ಶಶಿಕಲಾ, ಸಾವಿತ್ರಿ, ಸುಮಿತ್ರಾ, ರಂಜಿತಾ, ಸಾವಿತ್ರಿ, ಪ್ರೇಮಾ, ಪಾರ್ವತಿ, ಸುಜಾತಾ, ಮಲ್ಲಮ್ಮ, ಮಲ್ಲಿಕಾರ್ಜುನ, ಹಣಮಂತ, ಶ್ರೀಧರ್, ದೇವರಾಜ, ಬಸವರಾಜ, ಸಿದ್ದಪ್ಪ, ಅಲಿಪ್ ಪಾಷ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !