ಶುಕ್ರವಾರ, ಮಾರ್ಚ್ 31, 2023
22 °C

ಬೆಂಡೆಬೆಂಬಳಿ: ಹೊಟ್ಟೆ ನೋವು ತಾಳಲಾರದೆ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಡೆಬೆಂಬಳಿ (ವಡಗೇರಾ): ತಾಲ್ಲೂಕಿನ ಬೆಂಡೆಬೆಂಬಳಿ ಗ್ರಾಮದಲ್ಲಿ ವಿದ್ಯಾರ್ಥಿನಿಯೊಬ್ಬರು ಹೊಟ್ಟೆ ನೋವು ತಾಳದೆ ಬಾವಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಪೂಜಾ ಸಿದ್ದಣ್ಣಗೌಡ (17) ಮೃತ ವಿದ್ಯಾರ್ಥಿನಿ. ‘ಪ್ರಥಮ ಪಿಯುಸಿ ಓದುತ್ತಿದ್ದ ಪೂಜಾಗೆ ಬಹುದಿನಗಳಿಂದ ವಿಪರೀತ ಹೊಟ್ಟೆ ನೋವು ಇತ್ತು. ಎಲ್ಲ ರೀತಿಯ ಚಿಕಿತ್ಸೆ ನೀಡಿದರೂ ಕಡಿಮೆಯಾಗಿರಲಿಲ್ಲ. ನೋವು ತಾಳದೆ ಅದೇ ಚಿಂತೆಯಲ್ಲಿ ಇರುತ್ತಿದ್ದಳು. ಚಿಕ್ಕಪ್ಪನ ಮನೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಸಂಬಂಧಿಕರ ಹೊಲದ ಬಾವಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾಳೆ’ ಎಂದು ತಾಯಿ ಮಲ್ಲಮ್ಮ ಸಿದ್ದಣ್ಣಗೌಡ ದೂರಿನಲ್ಲಿ ದಾಖಲಿಸಿದ್ದಾರೆ.

ಈ ಕುರಿತು ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು