ಶನಿವಾರ, ಜುಲೈ 24, 2021
20 °C
ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್‍ ವಿತರಿಸಿದ ಶಾಸಕ ಮುದ್ನಾಳ

ವಿದ್ಯಾರ್ಥಿಗಳಲ್ಲಿ ತಾಂತ್ರಿಕ ಶಿಕ್ಷಣದ ಅರಿವೂ ಅಗತ್ಯ: ವೆಂಕಟರೆಡ್ಡಿಗೌಡ ಮುದ್ನಾಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ‘ಕಳೆದ ವರ್ಷ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ ಟಾಪ್‍ಗಳನ್ನು ನೀಡಲಾಗಿತ್ತು. ಈ ಬಾರಿ ಸರ್ಕಾರ ಟ್ಯಾಬ್ಲೆಟ್‌ ನೀಡಿ, ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ತಾಂತ್ರಿಕವಾಗಿ ಉತ್ತೇಜನ ನೀಡುತ್ತಿರುವುದು ಶ್ಲಾಘನೀಯ‘ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಹೇಳಿದರು.

ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸ್ಮಾರ್ಟ್ ಕರ್ನಾಟಕ ಯೋಜನೆಯಡಿಯಲ್ಲಿ ಸ್ಮಾರ್ಟ್ ಕ್ಲಾಸ್ ಕೋಣೆಗಳನ್ನು ಉದ್ಘಾಟಿಸಿ, ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್‍ಗಳನ್ನು ವಿತರಿಸಿ ಮಾತನಾಡಿದರು.

ಸರ್ಕಾರದ ವತಿಯಿಂದ ಉಚಿತವಾಗಿ ನೀಡುತ್ತಿರುವ ಟ್ಯಾಬ್‌ಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಭವಿಷ್ಯ ಉಜ್ವಲಗೊಳಿಸಿಕೊಳ್ಳುವಂತೆ ಸಲಹೆ ನೀಡಿದರು.

₹ 1.63 ಕೋಟಿ ವೆಚ್ಚದಲ್ಲಿ ರಾಜ್ಯಾದ್ಯಂತ 1.50 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ ಉಚಿತವಾಗಿ ನೀಡಲಾಗುತ್ತಿದೆ. ಕೋವಿಡ್‍ನಿಂದಾಗಿ ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ. ಆದರೂ ಮುಖ್ಯಮಂತ್ರಿ ಇಂಥ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಿ, ಶೈಕ್ಷಣಿಕ ಕಾಳಜಿ ಮೆರೆದಿರುವುದು ಅಭಿನಂದನೀಯ ಎಂದರು.

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಚಂಡ್ರಿಕಿ ಮಾತನಾಡಿ, ಕೋವಿಡ್‍ನಿಂದಾಗಿ ಭೌತಿಕ ತರಗತಿಗಳು ನಡೆಸಲು ಸಾಧ್ಯವಾಗುತ್ತಿಲ್ಲ. ಆನ್‍ಲೈನ್ ತರಗತಿಗಳಿಗೆ ಈ ಟ್ಯಾಬ್‍ಗಳು ತುಂಬಾ ಅನುಕೂಲ ಆಗಲಿವೆ ಎಂದರು.

ಪ್ರಾಂಶುಪಾಲ ಡಾ. ಸುಭಾಶ್ಚಂದ್ರ ಕೌಲಗಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದಕ್ಕೂ ಮೊದಲು ಸರ್ಕಾರಿ ಪದವಿ ಮಹಾವಿದ್ಯಾಲಯ ಮಹಿಳಾ ಕಾಲೇಜು ಮತ್ತು ವಸತಿಯುಕ್ತ ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಉಚಿತ ಟ್ಯಾಬ್‍ಗಳನ್ನು ವಿತರಿಸಲಾಯಿತು.

ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀನಿವಾಸರಾವ ದೊಡ್ಮನಿ ಸ್ವಾಗತಿಸಿದರು. ವಸತಿಯುಕ್ತ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಆರ್.ಕೇತನಕರ್ ವಂದಿಸಿದರು. ಪ್ರೊ.ಉಮೇಶ ನಿರೂಪಿಸಿದರು.

ಡಾ.ಸರ್ಮೋದಯ ಶಿವಪುತ್ರ, ಡಾ.ಜೆಟ್ಟೆಪ್ಪ, ಶರಣಬಸಪ್ಪ ರಾಯಕೋಟಿ, ಡಾ.ಪ್ರಸಾದ ಭಂಡಾರಿ, ದವಲಪ್ಪ, ಡಾ.ಮೊನಯ್ಯ ಕಲಾಲ, ಜೋಷಿ ಪ್ರಹ್ಲಾದ, ಡಾ.ಹಳಿಮನಿ ದೇವಿಂದ್ರಪ್ಪ, ಗುಂಡೂರಾವ್, ಈರಮ್ಮ ಭಾವಿಕಟ್ಟಿ, ಸಂತೋಷಿ, ಹಣಮಂತರಾವ್, ಹರೀಶ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು