ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ್ಞಾನಾರ್ಜನೆಗೆ ಅವಿರತ ಅಧ್ಯಯನ; ವಿಶ್ವಾರಾಧ್ಯ ಸ್ವಾಮೀಜಿ

Last Updated 12 ಜನವರಿ 2022, 5:54 IST
ಅಕ್ಷರ ಗಾತ್ರ

ಶಹಾಪುರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ನಿರಂತರವಾಗಿ ಅಧ್ಯಯನ ಮಾಡಬೇಕು. ಒಳ್ಳೆಯ ಪುಸ್ತಕ, ಅತ್ಯುತ್ತಮ ಸ್ನೇಹಿತರಿದ್ದಂತೆ ಎಂದು ಶ್ರೀದ್ವಾದಶ ಜ್ಯೋತಿರ್ಲಿಂಗ ಮಠದ ವಿಶ್ವಾರಾಧ್ಯ ಸ್ವಾಮೀಜಿ ಹೇಳಿದರು.

ನಗರದ ವಿಶ್ವಜ್ಯೋತಿ ಪದವಿ ಪೂರ್ವ ಹಾಗೂ ಪದವಿ ಮಹಾವಿದ್ಯಾಲಯ ಮತ್ತು ಸಾಯಿ ಪದವಿ ಮಹಾವಿದ್ಯಾಲಯದಲ್ಲಿ ಪಿಯು ಹಾಗೂ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಡಾ.ಚಂದ್ರಶೇಖರ ಸುಬೇದಾರ ಮಾತನಾಡಿ, ಜೀವನದ ಗುರಿಯನ್ನು ಕೇಂದ್ರೀಕರಿಸುವ ಮಹತ್ವದ ಘಟ್ಟ ಪದವಿ ಶಿಕ್ಷಣ. ಈ ಹಂತದಲ್ಲಿ ವಿದ್ಯಾರ್ಥಿಗಳು ಶ್ರಮವಹಿಸಿ ಅಭ್ಯಾಸ ಮಾಡಬೇಕು ಎಂದರು.

ಸಾಂಸ್ಕೃತಿಕ ಚಿಂತಕ ಡಾ. ಬಸವರಾಜ ಇಜೇರಿ ಮಾತನಾಡಿ, ವಿದ್ಯಾರ್ಥಿಗಳು ಪದವಿ ಅಂತದಲ್ಲಿ ಉತ್ತಮ ಕನಸು ಕಟ್ಟಿಕೊಂಡಿರುತ್ತಾರೆ. ಅವುಗಳ ಸಾಕಾರಕ್ಕೆ ಉಪನ್ಯಾಸಕರು ಮತ್ತು ಪಾಲಕರ ಪ್ರಯತ್ನಿಸಬೇಕು. ಸಣ್ಣಪುಟ್ಟ ಸಮಸ್ಯೆಗಳನ್ನು ಬದಿಗೊತ್ತಿ ಜೀವನದ ಗುರಿ ತಲುಪಬೇಕು ಎಂದು ಹೇಳಿದರು.

ಲೋಕಪುರ ಮಠದ ಮಹಾಂತ ಸ್ವಾಮೀಜಿ, ಕಾಲೇಜು ಪ್ರಾಚಾರ್ಯ ಚಂದ್ರಶೇಖರ ದಿಗ್ಗಿ, ಗರ್ಜಪ್ಪ ಪೂಜಾರಿ, ಸಂಸ್ಥೆಯ ಅಧ್ಯಕ್ಷ ರಾಜಶೇಖರ ದಿಗ್ಗಿ, ಬಸವರಾಜ ಅಳಹುಂಡಗಿ, ನರಸಪ್ಪ, ವಿನಾಯಕ, ಶ್ರೀಶೈಲ್, ಸುಮಲತಾ ದೊರಿ, ಮಾಳಪ್ಪ ಕುನ್ನೂರು, ಮಲ್ಲಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT