ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್-19 ಲಸಿಕೆ ವಿತರಣೆಗೆ ಸಕಲ ಸಿದ್ಧತೆ

ಕೊರೊನಾ ವಾರಿಯರ್ಸ್‌ಗೆ ಮೊದಲ ಹಂತದ ಲಸಿಕೆ: ಡಿಸಿ ರಾಗಪ್ರಿಯಾ
Last Updated 18 ಡಿಸೆಂಬರ್ 2020, 2:22 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್-19 ಲಸಿಕೆ ವಿತರಣೆಗೆ ಎಲ್ಲಾ ಬಗೆಯ ಸಿದ್ಧತೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್.ರಾಗಪ್ರಿಯಾ ತಿಳಿಸಿದರು.

ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ನಡೆದ ಕೋವಿಡ್-19 ಲಸಿಕೆಯ ಬಗ್ಗೆ ಪೂರ್ವ ತಯಾರಿ ಹಾಗೂ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಕೋವಿಡ್–19 ಸಾಂಕ್ರಮಿಕ ರೋಗ ಹರಡುವ ಸಂದರ್ಭದಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ಇಲಾಖೆಯ ಸಿಬ್ಬಂದಿ ಸೇರಿದಂತೆ ಇತರ ಇಲಾಖೆಯವರ ಕಾರ್ಯ ಶಾಘ್ಲನೀಯ ಎಂದು ಜಿಲ್ಲಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಮೊದಲ ಹಂತದ ಲಸಿಕೆಯನ್ನು ಕೊರೊನಾ ವಾರಿಯರ್ಸ್ ಅವರಿಗೆ ಪ್ರಾಯೋಗಿಕವಾಗಿ ನೀಡಲು ನಿರ್ಧರಿಸಲಾಗಿದೆ. ಲಸಿಕೆ ನೀಡುವ ಸಮಯದಲ್ಲಿ ಊಹಾಪೋಹಗಳು ಕೇಳಿಬರುತ್ತವೆ. ಆದರೆ, ಇದಕ್ಕೆ ಯಾರೂ ಕಿವಿಗೊಡಬಾರದೆಂದು ಹೇಳಿದರು.

ಕೋವಿಡ್-19 ಲಸಿಕೆ ಅಗತ್ಯವಿರುವವರು ಕೂಡಲೇ ಹತ್ತಿರದ ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಿ ನೋಂದಣಿ ಮಾಡಿ ಲಸಿಕೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಲಸಿಕೆ ದೊರೆತ ಬಳಿಕ ಹೆಚ್ಚು ಜನರಿಗೆ ನೀಡಲಾಗುವುದು. ಕೊರೊನಾ ನಿಯಂತ್ರಣಕ್ಕಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ಮೊದಲ ಹಂತದ ಲಸಿಕೆ ನೀಡಲಾಗುವುದು. ನಂತರ 50 ವರ್ಷ ಮೇಲ್ಪಟ್ಟವರಿಗೆ ನೀಡಲಾಗುವುದು ಎಂದರು.

ಈ ವೇಳೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾಶರ್ಮಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಇಂದುಮತಿ ಪಾಟೀಲ, ಆರ್‌ಸಿಎಚ್ ಡಾ.ಸೂರ್ಯಪ್ರಕಾಶ ಕುಂದಕೂರ, ಐಎಂಎ ಅಧ್ಯಕ್ಷ ಡಾ.ಸಿ.ಎಂ. ಪಾಟೀಲ, ಎಸ್‌ಎಂಒ ಡಾ.ಅನಿಲ್ ಜಾರಕೋಳಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಲಕ್ಷ್ಮೀಕಾಂತ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT