ಶಹಾಪುರ: ನೇಣು ಬಿಗಿದುಕೊಂಡು ಪ್ರೇಮಿಗಳ ಆತ್ಮಹತ್ಯೆ

ಶಹಾಪುರ: ಪ್ರೇಮಿಗಳಿಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ವಡಗೇರಾ ತಾಲ್ಲೂಕಿನ ಗುಂಡಗುರ್ತಿ ಗ್ರಾಮದಲ್ಲಿ ನಡೆದಿದೆ.
ಶರಣಬಸವ ಮೈಲಾರಪ್ಪ (22) ಮತ್ತು ಶೇಖಮ್ಮ ದೇವಿಂದ್ರಪ್ಪ (18) ನೇಣಿಗೆ ಶರಣಾದವರು.
ಕಳೆದ ಒಂದು ವರ್ಷದಿಂದ ಪ್ರೀತಿಸುತ್ತಿದ್ದ ಇವರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಯುವತಿ ಯಾದಗಿರಿ ನಗರದ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪಾಸು ಮಾಡಿದ್ದಳು. ಬಿ.ಎ ಪದವೀಧರನಾಗಿರುವ ಯುವಕ ಶರಣಬಸವ ಕೆಲಸಕ್ಕಾಗಿ ಬೆಂಗಳೂರಿಗೆ ತೆರಳಿದ್ದ. ಇನ್ನೇನು ಕಾಲೇಜು ಪ್ರಾರಂಭಗೊಳ್ಳುತ್ತಿರುವಾಗ ಶರಣಬಸವ ಗ್ರಾಮಕ್ಕೆ ಬಂದಿದ್ದ. ಅಲ್ಲದೆ ಯುವತಿಯ ಜತೆ ಮಾತುಕತೆ ನಡೆಸಿ ಮದುವೆ ಕುರಿತು ಪ್ರಸ್ತಾಪ ಮಾಡಿದ್ದ ಎಂದು ತಿಳಿದು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಸೋಮವಾರ ಬೆಂಗಳೂರಿನಿಂದ ಬಂದ ಯುವಕ ತನ್ನ ದೊಡ್ಡಮ್ಮಳ ಮನೆಯಲ್ಲಿ ಬಂದು ನೆಲೆಸಿದ್ದ. ರಾತ್ರಿ ಯುವತಿಯನ್ನು ಮನೆಗೆ ಕರೆದುಕೊಂಡು ಬಂದಿದ್ದ. ಬೆಳಿಗ್ಗೆ ಮನೆಯ ಬಾಗಿಲು ತೆರೆಯಲು ಹೋದಾಗ ಇಬ್ಬರು ನೇಣಿಗೆ ಶರಣಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ ಸೋನಾವಣೆ, ಡಿವೈಎಸ್ಪಿ ವೆಂಕಟೇಶ ಉಗಿಬಂಡಿ, ಶಹಾಪುರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಚೆನ್ನಯ್ಯ ಸಿ.ಹೀರೇಮಠ ಭೇಟಿ ನೀಡಿ ಪರಿಶೀಲಿಸಿದರು.
ಶಹಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.