ಗುರುವಾರ , ನವೆಂಬರ್ 26, 2020
19 °C
ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ಸುರಪುರ ನಗರಸಭೆ: ಬಿಜೆಪಿಯ ಸುಜಾತಾ ವೇಣುಗೋಪಾಲ್ ಜೇವರ್ಗಿ ಅಧ್ಯಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುರಪುರ (ಯಾದಗಿರಿ ಜಿಲ್ಲೆ): ಸುರಪುರ ನಗರಸಭೆಯ ಅಧ್ಯಕ್ಷರಾಗಿ ವಾರ್ಡ್‌ ಸಂಖ್ಯೆ 6ರ ಸುಜಾತಾ ವೇಣುಗೋಪಾಲ್ ಜೇವರ್ಗಿ, ಉಪಾಧ್ಯಕ್ಷರಾಗಿ ವಾರ್ಡ್‌ ಸಂಖ್ಯೆ 11ರ ಮಹೇಶ್ ಪಾಟೀಲ ಗುರುವಾರ ಅವಿರೋಧವಾಗಿ ಆಯ್ಕೆಯಾದರು. ಇಬ್ಬರು ಬಿಜೆಪಿ ಸದಸ್ಯರು.

ಸುರಪುರ ನಗರಸಭೆಯಲ್ಲಿ 31 ವಾರ್ಡ್‌ಗಳಿದ್ದು, ಬಿಜೆಪಿ 16, ಕಾಂಗ್ರೆಸ್‌ 15 ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನ ಎಸ್‌ಟಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಉಪ ವಿಭಾಗಾಧಿಕಾರಿ ಶಂಕರಗೌಡ ಸೋಮನಾಳ ಚುನಾವಣಾಧಿಕಾರಿಯಾಗಿದ್ದರು.


ಸುರಪುರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು