ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬೇಸಿಗೆ ಶಿಬಿರದಿಂದ ಮಕ್ಕಳ ಕೌಶಲ್ಯ ವೃದ್ಧಿ’

Last Updated 17 ಮೇ 2019, 9:32 IST
ಅಕ್ಷರ ಗಾತ್ರ

ಯಾದಗಿರಿ: ‘ಮಕ್ಕಳು ಬೇಸಿಗೆ ಶಿಬಿರದಲ್ಲಿ ಭಾಗವಹಿಸುವುದರಿಂದ ಹೊಂದಾಣಿಕೆ, ತಂಡದಲ್ಲಿ ಹಂಚಿಕೊಳ್ಳುವುದು, ಸಮಯ ಪಾಲನೆ ಮತ್ತು ಭಾಗವಹಿಸುವಿಕೆ ಕೌಶಲ್ಯಗಳು ಬೆಳೆಯುತ್ತವೆ. ಇದರಿಂದ ಮಕ್ಕಳು ಸರ್ವಾಂಗೀಣ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ’ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಧಾ ಜಿ.ಮಣ್ಣೂರ್ ಹೇಳಿದರು.

ನಗರದ ಸ್ತ್ರೀ ಶಕ್ತಿ ಭವನದಲ್ಲಿ ಇತ್ತೀಚೆಗೆ ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಬಾಲ ಭವನ ಸೊಸೈಟಿ ಸಂಯುಕ್ತ ಆಶ್ರಯದಲ್ಲಿ 6-14 ವರ್ಷದ ಮಕ್ಕಳಿಗೆ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಬೇಸಿಗೆ ಶಿಬಿರದ ಸಮಾರೋಪದಲ್ಲಿ ಅವರು ಮಾತನಾಡಿದರು.

‘ಬೇಸಿಗೆ ಶಿಬಿರವು ಮಕ್ಕಳಿಗೆ ಉತ್ತಮ ವೇದಿಕೆ. ತಮ್ಮಲ್ಲಿ ಅಡಗಿರುವ ಶಕ್ತಿ, ಕೌಶಲ್ಯಗಳನ್ನು ಹೊರ ಹಾಕಲು ಉಪಯುಕ್ತ. ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಬಾಲ ಭವನ ಸೊಸೈಟಿಯ ಎಲ್ಲಾ ಕಾರ್ಯಕ್ರಮಗಳಲ್ಲಿ ಮಕ್ಕಳು ಭಾಗವಹಿಸಬೇಕು’ ಎಂದು ಸಲಹೆ ನೀಡಿದರು.

ಜಿಲ್ಲಾ ಬಾಲಭವನ ಸಂಯೋಜಕ ಅನಿಲ್ ಅವರು ಬಾಲ ಭವನ ಸೊಸೈಟಿಯಲ್ಲಿರುವ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಮೇಲ್ಚಿಚಾರಕಿಯರು ಹಾಗೂ ಶಿಬಿರದ ಸಂಪನ್ಮೂಲ ವ್ಯಕ್ತಿಗಳಾದ ಪುಷ್ಪಾ ಮತ್ತು ಅಬ್ದುಲ್ ಬಿ. ಇದ್ದರು. ಮೇಲ್ವಿಚಾರಕಿ ಮಹಿಬೂಬಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT