ವಂಕಸಂಬ್ರ (ಸೈದಾಪುರ): ‘ಬಾಲಮೇಳ ಮಕ್ಕಳ ದೈಹಿಕ, ಮಾನಸಿಕ, ಬೌದ್ಧಿಕ, ಭಾವನಾತ್ಮಕ ಬೆಳವಣಿಗೆಗೆ ಪೂರಕ’ ಎಂದು ಅಂಗನವಾಡಿ ಮೇಲ್ವಿಚಾರಕಿ ಅನಿತಾ ದೊಡ್ಡಮನಿ ಅಭಿಪ್ರಾಯಪಟ್ಟರು.

ಸಮೀಪದ ವಂಕಸಂಬ್ರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಅಜೀಂ ಪ್ರೇಮ್ಜೀ ಫೌಂಡೇಶನ್ನ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಾಲಮೇಳ ಕಾರ್ಯಕ್ರಮಲ್ಲಿ ಮಾತನಾಡಿದರು.

ಮಕ್ಕಳ ಸಮಗ್ರ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ಅಂಗನವಾಡಿ ಕೇಂದ್ರಗಳಲ್ಲಿ ನಿರ್ಮಾಣ ಮಾಡಲಾಗುತ್ತದೆ. ಶಿಕ್ಷಣಕ್ಕೆ ಬೇಕಾದ ಉತ್ತಮ ಅಡಿಪಾಯಯವನ್ನು ಕಲಿಕಾ ಚಟುವಟಿಕೆಗಳ ಮೂಲಕ ದೊರಕಿಸಿಕೊಡಲಾಗುತ್ತದೆ ಎಂದರು.

ಬಾಲಮೇಳ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರತರುವ ಕೆಲಸ ಮಾಡುತ್ತಿದೆ. ಮಕ್ಕಳ ಅಭಿರುಚಿ ಗುರುತಿಸಿ ಪೋಷಕರಿಗೆ ಮನವರಿಕೆ ಮಾಡಿಕೊಡಲಾಗುತ್ತದೆ ಎಂದು ಹೇಳಿದರು.

ನಂತರ ಅಜೀಂ ಪ್ರೇಮ್ಜೀ ಫೌಂಡೇಶನ್ನ ಸಂಯೋಜಕ ಮಲ್ಲೇಶ ಮಾತನಾಡಿ,‘ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ವಾರದ ವಿಷಯಕ್ಕೆ ಅನುಗುಣವಾಗಿ ಶಾಲಾ ಪೂರ್ವ ಶಿಕ್ಷಣ ನೀಡಲಾಗುತ್ತದೆ. ನಿತ್ಯ ಹಾಡು, ಅಭಿನಯ, ಗೀತೆ, ಕಥೆ, ಭಾವನಾತ್ಮಕ, ಕ್ರಿಯಾತ್ಮಕ ಚಟುವಟಿಕೆಗಳನ್ನು ಮಾಡಿಸಲಾಗುತ್ತದೆ’ ಎಂದರು.

ಸುರೇಶಗೌಡ, ರಾಮು, ಆಶಾ ಕಾರ್ಯಕರ್ತೆಯರಾದ ಸುರೇಖಾ, ಲಕ್ಕಮ್ಮ, ಬಸ್ಸಮ್ಮ, ನರಸಿಂಗಮ್ಮ, ಶ್ರೀಲತಾ ಹಾಗೂ ಮಕ್ಕಳು, ಪೋಷಕರು, ಗ್ರಾಮಸ್ಥರು ಭಾಗವಹಿಸಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.