ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಿಷ್ಠ ಬೆಂಬಲ ಬೆಲೆಯಡಿ ಬಿಳಿಜೋಳ ಖರೀದಿ: ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ

Last Updated 18 ಡಿಸೆಂಬರ್ 2021, 5:11 IST
ಅಕ್ಷರ ಗಾತ್ರ

ಯಾದಗಿರಿ: ‘2021-22ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಬಿಳಿಜೋಳ ಖರೀದಿಸಬೇಕಾಗಿದೆ. ಆದ್ದರಿಂದ ಜಿಲ್ಲೆಯ ರೈತರು ಬೆಳೆದ ಜೋಳ ಖರೀದಿಗೆ ಕೇಂದ್ರಗಳನ್ನು ತೆರೆಯಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.ಅವರು ತಿಳಿಸಿದ್ದಾರೆ.

ಪ್ರತಿ ರೈತರಿಂದ ಪ್ರತಿ ಎಕರೆಗೆ 10 ಕ್ವಿಂಟಲ್‌ನಂತೆ ಗರಿಷ್ಠ 20 ಕ್ವಿಂಟಲ್ ಬಿಳಿಜೋಳವನ್ನು ಖರೀದಿಸಲಾಗುತ್ತದೆ. ಬಿಳಿಜೋಳ ಹೈಬ್ರಿಡ್ ಪ್ರತಿ ಕ್ವಿಂಟಲ್‌ಗೆ ₹2,738 ಹಾಗೂ ಬಿಳಿ ಜೋಳ ಮಾಲ್ದಂಡಿ ಪ್ರತಿ ಕ್ವಿಂಟಲ್‌ಗೆ ₹2,758 ರಂತೆ ಖರೀದಿಸಲಾಗುತ್ತದೆ ಎಂದರು. ಯಾದಗಿರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ ಶಬನಂ ಮೊ.ಸಂ: 77608 26959, ಸುರಪುರ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣ ನಸೀರ್ ಅಹ್ಮದ್ ಮೊ.ಸಂ: 99725 22793, ಶಹಾಪುರ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ, ಟಿಎಪಿಸಿಎಂಎಸ್‌ ಆವರಣ ನಯೀಮ್ ಅಹ್ಮದ್ ಮೊ.ಸಂ: 74837 19938, ಹುಣಸಗಿ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ, ಟಿಎಪಿಸಿಎಂಎಸ್‌ ಆವರಣ ಸಿದ್ದಣ್ಣ ನಾಯಕ ಮೊ.ಸಂ: 79751 14798, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ನಾಯ್ಕಲ್ ಗ್ರಾಮ ಮೊ.ಸಂ: 90369 35603 ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT