ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಅಭ್ಯರ್ಥಿ ರಾಜೂಗೌಡ ನಾಮಪತ್ರ ಸಲ್ಲಿಕೆ

ಸುರಪುರ ವಿಧಾನಸಭೆ ಉಪ ಚುನಾವಣೆ
Published 13 ಏಪ್ರಿಲ್ 2024, 15:42 IST
Last Updated 13 ಏಪ್ರಿಲ್ 2024, 15:42 IST
ಅಕ್ಷರ ಗಾತ್ರ

ಸುರಪುರ: ಸುರಪುರ (ಎಸ್‌ಟಿ ಮೀಸಲು) ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ನರಸಿಂಹ ನಾಯಕ (ರಾಜೂಗೌಡ) ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಬೆಂಬಲಿಗರೊಂದಿಗೆ ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿದ ರಾಜೂಗೌಡ ಚುನಾವಣಾಧಿಕಾರಿ ಕಾವ್ಯರಾಣಿಗೆ ಉಮೇದುವಾರಿಕೆ ಸಲ್ಲಿಸಿದರು.

ಮುಖಂಡರಾದ ಯಲ್ಲಪ್ಪ ಕುರುಕುಂದಿ, ರಾಜಾ ಹನುಮಪ್ಪ ನಾಯಕ, ಭೀಮಾಶಂಕರ ಬಿಲ್ಲವ್, ಶೇಖರ ನಾಯ್ಕ ಜೊಗಂಡಭಾವಿ ಜೊತೆಗಿದ್ದರು.

ಬಿಳಿಕ ಮಾತನಾಡಿದ ರಾಜೂಗೌಡ ಮಾತನಾಡ, ‘ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದೇನೆ. ಮತ್ತೆ ಒಳ್ಳೆಯ ಸಮಯ ನೋಡಿಕೊಂಡು ಕಾರ್ಯಕರ್ತರೊಂದಿಗೆ ಆಗಮಿಸಿ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಸುತ್ತೇನೆ’ ಎಂದು ತಿಳಿಸಿದರು.

‘ನಾನು ಈ ಚುನಾವಣೆ ಬಯಸಿರಲಿಲ್ಲ. ದೇವರೇ ಅವಕಾಶ ತಂದುಕೊಟ್ಟಿದ್ದಾನೆ ಎಂದು ಭಾವಿಸುತ್ತೇನೆ. ಕ್ಷೇತ್ರದ ಜನ ಅನುಕಂಪಕ್ಕೆ ಮರುಳಾಗುವುದಿಲ್ಲ. ಅಭಿವೃದ್ದಿ ಕೈ ಹಿಡಿಯುತ್ತಾರೆ ಎಂಬ ಭರವಸೆ ಇದೆ’ ಎಂದರು.

ಸುರಪುರದಲ್ಲಿ ಶುಕ್ರವಾರ ಬಿಜೆಪಿ ಅಭ್ಯರ್ಥಿ ರಾಜೂಗೌಡ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿ ಹೊರ ಬರುತ್ತಿರುವುದು
ಸುರಪುರದಲ್ಲಿ ಶುಕ್ರವಾರ ಬಿಜೆಪಿ ಅಭ್ಯರ್ಥಿ ರಾಜೂಗೌಡ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿ ಹೊರ ಬರುತ್ತಿರುವುದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT