ಸುರಪುರ: ‘ಭಾರತೀಯ ಬೌದ್ಧ ಮಹಾಸಭಾ ವತಿಯಿಂದ ಬುದ್ಧ ವಿಹಾರದ ದರ್ಶನ ಭೂಮಿ ಕೆರೆ ದಂಡೆಯ ಪಕ್ಕದಲ್ಲಿ ಮೇ 24ರಂದು ಅಂಬೇಡ್ಕರ್ ಪುತ್ಥಳಿ ಅನಾವರಣ ಮತ್ತು ಸರಳ ಸಾಮೂಹಿಕ ವಿವಾಹ ಸಮಾರಂಭ ಆಯೋಜಿಸಲಾಗಿದೆ’ ಎಂದು ಬೌದ್ಧ ಮಹಾಸಭಾ ಉಪಾಸಕ ಮಲ್ಲಿಕಾರ್ಜುನ ಕ್ರಾಂತಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘6 ಅಡಿ ಎತ್ತರದ ಸಂಗಮರಿ ಕಲ್ಲಿನಲ್ಲಿ ಅಂಬೇಡ್ಕರ್ ಪುತ್ಥಳಿ ಕೆತ್ತಲಾಗಿದೆ. ಅಂದು ಬೆಳಿಗ್ಗೆ 11 ಗಂಟೆಗೆ ಬೌದ್ಧ ಪದ್ಧತಿಯಂತೆ ಪುತ್ಥಳಿ ಅನಾವರಣ ನಡೆಯಲಿದೆ. ನಂತರ ಬೌಧ ಧರ್ಮದ ಪ್ರಕಾರ ಸರಳ ಸಾಮೂಹಿಕ ವಿವಾಹ ನಡೆಯಲಿವೆ’ ಎಂದು ಮಾಹಿತಿ ನೀಡಿದರು.

‘ಅರ್ಜಿ ಸಲ್ಲಿಸಲು ಮೇ 20 ಕೊನೆಯ ದಿನವಾಗಿದ್ದು 9448221530, 7760999093, 9845557785, 8861666668 ಸಂಪರ್ಕಿಸಿ ಉಚಿತ ನೋಂದಣಿ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

‘ಬೌದ್ಧ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಬಾಬಾಸಾಹೇಬ ಅಂಬೇಡ್ಕರ್ ವಂಶದ ಭೀಮರಾವ ಅಂಬೇಡ್ಕರ್, ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ದರ್ಶನ ಸೋಮಶೇಖರ, ಜ್ಞಾನಪ್ರಕಾಶ ಸ್ವಾಮಿಜಿ, ಪ್ರಸಾದ ಅಪ್ಪಯ್ಯ, ಪ್ರಿಯಾಂಕ್ ಖರ್ಗೆ ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳ ಸಚಿವರು, ಶಾಸಕರು, ಸಂಸದರು ಭಾಗವಹಿಸಲಿದ್ದಾರೆ’ ಎಂದು ವಿವರಿಸಿದರು.

ಮಾನಪ್ಪ ಕಟ್ಟಿಮನಿ, ಅಪ್ಪಣ್ಣ ಗಾಯಕವಾಡ, ಚಂದ್ರಶೇಖರ ಕಟ್ಟಿಮನಿ, ಮೂರ್ತಿ ಬೊಮ್ಮನಳ್ಳಿ ಮಾತನಾಡಿದರು. ಮಣ್ಣ ಶೆಳ್ಳಗಿ, ಸಿದ್ದಪ್ಪ ಸುರಪುರಕರ್, ಮಾನಪ್ಪ ಶೆಳ್ಳಗಿ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-30-1970569228

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.