ಸುರಪುರ: ನಗರದ ಪಂಚಾಂಗ ಮಠದಲ್ಲಿ ಹಮ್ಮಿಕೊಂಡಿದ್ದ 103ನೇ ಬಸವ ಜಯಂತ್ಯುತ್ಸವದ ಬಸವೇಶ್ವರರ ಭಾವಚಿತ್ರದ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸೋಮವಾರ ಸಂಜೆ ಶ್ರದ್ಧಾ-ಭಕ್ತಿಯೊಂದಿಗೆ ಅದ್ಧೂರಿಯಾಗಿ ಜರುಗಿತು.

ಶಾಸಕ ರಾಜಾ ವೇಣುಗೋಪಾಲನಾಯಕ ಅವರು ಬಸವ ಜಯಂತಿಯ ವಿಶೇಷ ಪೂಜೆ ಸಲ್ಲಿಸಿದರು. ನಂತರ ಬಸವೇಶ್ವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ‘ಕಳೆದ 103 ವರ್ಷಗಳಿಂದ ಸತತವಾಗಿ ಈ ಮಠದಲ್ಲಿ ಬಸವ ಜಯಂತಿ ಆಚರಿಸಿಕೊಂಡು ಬರುತ್ತಿರುವುದು ನಿಜಕ್ಕೂ ಹೆಮ್ಮೆಪಡುವ ಸಂಗತಿ’ ಎಂದು ಹೇಳಿದರು.

ನಂತರ ಬಸವಣ್ಣನವರ ಭಾವಚಿತ್ರವನ್ನು ಅಲಂಕರಿಸಿದ ಟ್ರ್ಯಾಕ್ಟರ್ನಲ್ಲಿ ಪ್ರತಿಷ್ಠಾಪಿಸಲಾಯಿತು. ಶಾಸಕರು ಟ್ರ್ಯಾಕ್ಟರ್ ನಡೆಸುವುದರ ಮೂಲಕ ಬಸವ ಜಯಂತಿಯ ಮೆರವಣಿಗೆಗೆ ಚಾಲನೆ ನೀಡಿದರು. ಭವ್ಯ ಮೆರವಣಿಗೆಯಲ್ಲಿ ಭಕ್ತರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಯಘೋಷ ಮೊಳಗಿಸಿದರು. ಮಂಗಳ ವಾದ್ಯಗಳು ಮೆರವಣಿಗೆಗೆ ವಿಶೇಷ ಕಳೆ ನೀಡಿದವು.

ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಈ ಮೆರವಣಿಗೆ ಭಕ್ತರ ಮನದಲ್ಲಿ ಉತ್ಸಾಹ, ಸಡಗರ ತುಂಬಿತು. ಬಸವಣ್ಣನವರ ಸಮಾನತೆ, ಕಾಯಕ ಮತ್ತು ದಾಸೋಹ ತತ್ವಗಳನ್ನು ಸಾರುವ ಘೋಷಣೆಗಳು ಎಲ್ಲರ ಗಮನ ಸೆಳೆದವು.

ನಿಷ್ಠಿ ಕಡ್ಲಪ್ಪನವರ ಮಠದ ಪ್ರಭುಲಿಂಗ ಸ್ವಾಮೀಜಿ, ತಾಲ್ಲೂಕು ವೀರಶೈವ ಲಿಂಗಾಯತ ಸಮಿತಿ ಅಧ್ಯಕ್ಷ ಸುರೇಶ ಸಜ್ಜನ, ಪ್ರಮುಖರಾದ ಸುನೀಲ ಸರಪಟ್ಟಣಶೆಟ್ಟರು, ಚಂದ್ರಕಾಂತ ಕಳ್ಳಿಮನಿ, ವೀರೇಶ ಪಂಚಾಂಗಮಠ, ಬಸವರಾಜ ಜಮದ್ರಖಾನಿ, ಮಹೇಶ ಯಾದವ, ಬಸವರಾಜ ಜಾಲಹಳ್ಳಿ, ವೀರೇಶ ನಿಷ್ಠಿ ದೇಶಮುಖ, ಸುಗೂರೇಶ ವಾರದ, ಶರಣಪ್ಪ ಕಲಕೇರಿ, ಸಿದ್ದಲಿಂಗಯ್ಯಸ್ವಾಮಿ ಕಡ್ಲಪ್ಪಮಠ, ಶರಣಬಸವ ಮುಧೋಳ, ಪ್ರಕಾಶ ಅಂಗಡಿ ಕನ್ನೆಳ್ಳಿ, ಮಲ್ಲಿಕಾರ್ಜುನರೆಡ್ಡಿ ಅಮ್ಮಾಪುರ, ರಮೇಶ ದೊರೆ ಆಲ್ದಾಳ, ಸಜ್ಜನಕುಮಾರ ಕಲ್ಯಾಣಶೆಟ್ಟಿ, ಪ್ರಕಾಶ ಬಣಗಾರ ಇತರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-30-203084487

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.