ಸುರಪುರ: ‘ಘನ ಘೋರ ತಪಸ್ಸಿನಿಂದ ಗಂಗೆಯನ್ನು ಧರೆಗಿಳಿಸಿ ಮಾನವ ಜನಾಂಗವನ್ನು ಉದ್ಧರಿಸಿದ ಶ್ರೇಯಸ್ಸು ಭಗೀರಥ ಮಹರ್ಷಿಗಳದ್ದು. ಎಷ್ಟೇ ಕಷ್ಟದ ಕೆಲಸವಾದರೂ ದೃಢಸಂಕಲ್ಪ ಮತ್ತು ಶ್ರಮವಿದ್ದರೆ ಅದನ್ನು ಸಾಧಿಸಬಹುದು ಎನ್ನುವುದು ಅವರ ಜೀವನದಿಂದ ನಾವು ಕಲಿಯಬೇಕಾದ ಪಾಠವಾಗಿದೆ’ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.

ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ಗುರುವಾರ ಹಮ್ಮಿಕೊಂಡಿದ್ದ ಮಹರ್ಷಿ ಭಗೀರಥ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

‘ಮಹಾನ್ ತಪಸ್ವಿ, ರಾಜಋಷಿ ಭಗೀರಥ ಮಹರ್ಷಿ ಅವರ ತ್ಯಾಗ, ಸಮರ್ಪಣೆ ಮತ್ತು ಆದರ್ಶಗಳು ಪ್ರತಿಯೊಬ್ಬರ ಜೀವನಕ್ಕೆ ಸದಾ ಪ್ರೇರಣೆಯಾಗಿವೆ. ಅವರು ಛಲ ಮತ್ತು ದೃಢಸಂಕಲ್ಪದ ಪ್ರತೀಕವಾಗಿದ್ದಾರೆ’ ಎಂದರು.

ಖಾನಾಪುರ ಎಸ್ಎಚ್ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಬಸವರಾಜ ದೋರನಹಳ್ಳಿ ರುಕ್ಮಾಪುರ ವಿಶೇಷ ಉಪನ್ಯಾಸ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಎಚ್.ಎ. ಸರಕಾವಸ್ ಮಾತನಾಡಿದರು. ಟಿಎಚ್ಒ ಡಾ.ಆರ್.ವಿ.ನಾಯಕ, ಭಗೀರಥ ಸಮಾಜದ ಅಧ್ಯಕ್ಷ ಮಾನಪ್ಪ ಗೋನಾಲ ವೇದಿಕೆಯಲ್ಲಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜ ಬಾಂಧವರಿಗೂ ಮತ್ತು ವಿವಿಧ ಸಂಘ-ಸಂಘ ಸಂಸ್ಥೆಗಳ ಸಾಧಕರಿಗೆ ಸನ್ಮಾನಿಸಿ ಗೌರವಿಸಿದರು.

ಶಿಕ್ಷಕರಾದ ಶರಣಬಸವ ಗೋನಾಲ ಸ್ವಾಗತಿಸಿದರು. ಮಹಾದೇವಪ್ಪ ಗುತ್ತೇದಾರ್ ನಿರೂಪಿಸಿದರು. ಸಿದ್ದಣ್ಣ ಸಾಲಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-30-1356167226

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.