ಸುರಪುರ: ನಗರದ ಅಂಬೇಡ್ಕರ್ ಬಡಾವಣೆಯಿಂದ ಬುದ್ಧ ವಿಹಾರಕ್ಕೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ದುರಸ್ತಿ ಮಾಡುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ರಾಜ್ಯ ಸಮಿತಿ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಆಗ್ರಹಿಸಿದ್ದಾರೆ.

‘ಚರಂಡಿ ವ್ಯವಸ್ಥೆ ಇಲ್ಲ. ಸ್ವಚ್ಛತೆ ಮರೀಚಿಕೆಯಾಗಿದೆ. ಬಚ್ಚಲು ಮೋರಿಯ ನೀರು ರಸ್ತೆ ಮೇಲೆ ಹರಿಯುತ್ತದೆ. ಅಲ್ಲಲ್ಲಿ ತೆಗ್ಗು ದಿನ್ನೆಗಳು ಇವೆ. ಜನರು ತಿರುಗಾಡಲು, ವಾಹನ ಸವಾರರು ವಾಹನ ಚಲಾಯಿಸಲು ಪರದಾಡುವಂತಾಗಿದೆ’ ಎಂದು ತಿಳಿಸಿದ್ದಾರೆ.

‘ಮೇ 24 ರಂದು ಈ ಬಡಾವಣೆಯಲ್ಲಿ ಅಂಬೇಡ್ಕರ್ ಮೂರ್ತಿ ಅನಾವರಣ ಕಾರ್ಯಕ್ರಮ ನಡೆಯುತ್ತದೆ. ಬುದ್ಧ ವಿಹಾರದಲ್ಲಿ ಬೌದ್ಧ ಧರ್ಮದ ಪದ್ಧತಿಯಂತೆ ಉಚಿತ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸ್ಥಾನಿಕರು, ಅಂಬೇಡ್ಕರ್ ಮನೆತನದ ಭೀಮರಾವ ಅಂಬೇಡ್ಕರ್ ಇತರ ಗಣ್ಯರು ಪಾಲ್ಗೊಳ್ಳುವರು. ಸುಮಾರು 10 ಸಾವಿರ ಜನ ಸೇರುವ ನಿರೀಕ್ಷೆ ಇದೆ. ಕಾರಣ ಶೀಘ್ರ ರಸ್ತೆ ದುರಸ್ತಿ ಮಾಡಿ ನೈರ್ಮಲ್ಯ ಕಾಪಾಡಬೇಕು’ ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-30-5565293

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.