ಸುರಪುರ: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಭೆ ಜರುಗಿತು.

ತಾಲ್ಲೂಕು ಅಧ್ಯಕ್ಷ ಬೀರಲಿಂಗ ಬಾದ್ಯಾಪುರ ಮಾತನಾಡಿ, ‘ಗ್ಯಾರಂಟಿ ಯೋಜನೆಗಳನ್ನು ಕಡ್ಡಾಯವಾಗಿ ಫಲಾನುಭವಿಗಳಿಗೆ ತಲುಪಿಸಬೇಕು. ಗೃಹಲಕ್ಷ್ಮಿಯೋಜನೆಯ ಪ್ರತಿಯೊಬ್ಬ ಅರ್ಹ ಮಹಿಳಾ ಫಲಾನುಭವಿಗೆ ಮಾಸಿಕ ₹ 2 ಸಾವಿರ ಜಮೆ ಮಾಡಬಕು ಎಂದು ಸೂಚಿಸಿದರು.

‘ವಿದ್ಯಾರ್ಥಿನಿಯರು ಮತ್ತು ಮಹಿಳೆಯರು ಹೆಚ್ಚು ಸಂಖ್ಯೆಯಲ್ಲಿ ಬಸ್ ನಿಲ್ದಾಣದ ಹತ್ತಿರ ಇದ್ದಾಗ ಬಸ್ ನಿಲ್ಲಿಸದೆ ಹೋಗುತ್ತಾರೆ. ಎಂಬ ದೂರುಗಳಿವೆ. ಈ ರೀತಿಯ ಬೇಜವಾಬ್ದಾರಿಯುತವಾಗಿ ನಡೆದುಕೊಳ್ಳುವುದು ಸರಿಯಲ್ಲ’ ಎಂದು ಬಸ್ ಘಟಕ ವ್ಯವಸ್ಥಾಪಕರಿಗೆ ತಿಳಿಸಿದರು.

‘ಅನ್ನಭಾಗ್ಯ ಯೋಜನೆಯಡಿ ಎಲ್ಲಾ ಅರ್ಹ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ಪಾವತಿ ಮಾಡಬೇಕು. ನ್ಯಾಯಬೆಲೆ ಅಂಗಡಿಗಳು ಸಮಯಕ್ಕೆ ಸರಿಯಾಗಿ ತೆಗೆದಿರುವುದಿಲ್ಲ ಮತ್ತು ಒಂದು ದಿನ ಬಯೊಮೆಟ್ರಿಕ್ ಹಾಕಿಸಿ ಮತ್ತೊಂದು ದಿನ ರೇಷನ್ ತೆಗೆದುಕೊಂಡು ಹೋಗಲು ಸೂಚಿಸುತ್ತಿದ್ದಾರೆ. ಬಯೋಮೆಟ್ರಿಕ್ ಮಾಡಿದ ನಂತರ ಪ್ರತಿ ತಿಂಗಳು ದಿನಾಂಕ ಹಾಗೂ ವೇಳೆಯನ್ನು ನಿಗದಿಪಡಿಸಿ ವಿತರಣೆ ಮಾಡಬೇಕು’ ಎಂದು ಆಹಾರ ನಿರೀಕ್ಷಕರಿಗೆ ಹೇಳಿದರು.

ಗ್ಯಾರಂಟಿ ಯೋಜನೆಯ ಸಮಿತಿ ಸದಸ್ಯರಾದ ವಿಜಯಕುಮಾರ, ವಿಶ್ವ ದಿವಳಗುಡ್ಡ, ಪಾರಪ್ಪ ದೇವತ್ಕಲ್, ವೆಂಕಟೇಶ, ಶೇಖಪ್ಪ ಬಡಿಗೇರ್, ಕಿರಣಕುಮಾರ, ಖಾದರ್ ನಗನೂರು, ಪರಮಣ್ಣ ಕಕ್ಕೇರಾ, ಪರಶುರಾಮ ಚಿಂಚೋಳಿ, ಭೀಮಣ್ಣ ದೊಡ್ಡಮನಿ ಇದ್ದರು.

ಸಿಡಿಪಿಒ ಅನಿಲ ಕಾಂಬ್ಳೆ, ಬಸ್ ಘಟಕ ವ್ಯವಸ್ಥಾಪಕ ಭೀಮಸಿಂಗ್ ರಾಠೋಡ್, ಆಹಾರ ಇಲಾಖೆ ಅಧಿಕಾರಿ ಚಿದಾನಂದ, ಜೆಸ್ಕಾಂ ಮತ್ತು ಜಿಲ್ಲಾ ಕೌಶಲ ಇಲಾಖೆ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.