ಸುರಪುರ: ಅಗತ್ಯವಾದಷ್ಟು ಗೊಬ್ಬರ ಪೂರೈಕೆ, ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ-ಹಸಿರು ಸೇನೆ ತಾಲ್ಲೂಕು ಸಮಿತಿ ಮುಖಂಡರು ಗಾಂಧೀಜಿ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ಮಾಡಿದರು.

ಕಳೆದ ಮೂರ್ನಾಲ್ಕು ವರ್ಷಗಳಿಂದ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ರೈತರು ಆರ್ಥಿಕವಾಗಿ ಜರ್ಜರಿತರಾಗಿದ್ದಾರೆ. ಕೀಟನಾಶಕ ಹಾಗೂ ಬಿತ್ತನೆ ಬೀಜಗಳ ಬೆಲೆ ಗಗನಕ್ಕೇರಿದೆ. ಸರ್ಕಾರವು ಕೀಟನಾಶಕ ಹಾಗೂ ಬಿತ್ತನೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳ ಮೂಲಕ ರಿಯಾಯತಿ ದರದಲ್ಲಿ ಒದಗಿಸಬೇಕು. ಕಳಪೆ ಗುಣಮಟ್ಟದ ಬೀಜ, ಗೊಬ್ಬರ ಮಾರಾಟ ಆಗದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.

ರೈತರು ಕೃಷಿ ಚಟುವಟಿಕೆಗಳಿಗಾಗಿ ಡೀಸೆಲ್ ಪಡೆಯಲು ಪೆಟ್ರೋಲ್ ಬಂಕ್ಗಳಿಗೆ ಹೋದಾಗ ಕ್ಯಾನ್ಗಳಲ್ಲಿ ಇಂಧನ ನೀಡಲು ಬಂಕ್ ಮಾಲೀಕರು ನಿರಾಕರಿಸುತ್ತಿದ್ದಾರೆ. ಇದರಿಂದ ರೈತರಿಗೆ ಕೃಷಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆಯನ್ನು ನಿವಾರಿಸಲು ಪ್ರತಿ ಪೆಟ್ರೋಲ್ ಬಂಕ್ಗೆ ಇಬ್ಬರು ಪೊಲೀಸ್ರನ್ನು ನೇಮಿಸಿ ರೈತರಿಗೆ ಸುಗಮವಾಗಿ ಇಂಧನ ದೊರೆಯುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

ಬೀದರ್-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಹತ್ತಿಗೂಡೂರು ಕ್ರಾಸ್ನಿಂದ ಬಂಡೋಳಿ ಸೇತುವೆಯವರೆಗೆ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ. ಈ ರಸ್ತೆಯನ್ನು ಕೂಡಲೇ ಅಗಲೀಕರಣ ಮಾಡಬೇಕು. ದೇವತ್ಕಲ್ದಿಂದ ಹಾಲಬಾವಿ ರಸ್ತೆ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇದನ್ನು ಕೂಡಲೇ ಪೂರ್ಣಗೊಳಿಸಬೇಕು ಎಂದರು.

ಸುರಪುರದ ಮುಖ್ಯ ರಸ್ತೆಗಳಲ್ಲಿ ತರಕಾರಿ ಮತ್ತು ಹಣ್ಣಿನ ವ್ಯಾಪಾರಿಗಳು ರಸ್ತೆ ಬದಿಯಲ್ಲಿ ಕುಳಿತುಕೊಂಡು ವ್ಯಾಪಾರ ಮಾಡುತ್ತಿರುವುದರಿಂದ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಅವರನ್ನು ಮಾರುಕಟ್ಟೆ ಮಳಿಗೆಗಳಿಗೆ ಸ್ಥಳಾಂತರಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ನಗರದಲ್ಲಿ ಪಾರ್ಕಿಂಗ್ ವ್ಯವಸ್ಥೆ ಸರಿಪಡಿಸಬೇಕು. ರಂಗಂಪೇಟೆಯ ದನದ ಸಂತೆ ಮೈದಾನವು ಈಗ ಕಟ್ಟಡಗಳಿಂದ ಆವೃತವಾಗಿದೆ. ರೈತರ ಹಿತ ದೃಷ್ಟಿಯಿಂದ ಅಲ್ಲಿ ಸಂತೆ, ದನದ ಸಂತೆ ನಡೆಯಲು ಅನುಕೂಲ ಮಾಡಿಕೊಡಬೇಕು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಅಯ್ಯಣ್ಣ ಹಾಲಭಾವಿ, ಉಪಾಧ್ಯಕ್ಷ ತಿಪ್ಪಣ್ಣ ಜಂಪಾ, ತಾಲ್ಲೂಕು ಗೌರವಾಧ್ಯಕ್ಷ ಮಲ್ಲಣ್ಣ ಹಾಲಬಾವಿ, ಅಧ್ಯಕ್ಷ ಹಣಮಂತ್ರಾಯ ಚಂದಲಾಪೂರ, ಕಾರ್ಯದರ್ಶಿ ವೆಂಕಟೇಶಗೌಡ ಕುಪಗಲ್, ಪ್ರಮುಖರಾದ ಸಾಹೇಬಗೌಡ ಮದಲಿಂಗನಾಳ, ಹಣಮಗೌಡ ನಾರಾಯಣಪೂರ, ಭೀಮಣ್ಣ ತಿಪ್ಪನಟಗಿ, ಭೀಮನಗೌಡ ಕರ್ನಾಳ, ರಾಘು ಕುಪಗಲ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-30-95846315

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.