ಸುರಪುರ: ‘ಮೇ 10ರಂದು ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಬೆಳಿಗ್ಗೆ 8.30ಕ್ಕೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಬೇಕು’ ಎಂದು ತಹಶೀಲ್ದಾರ್ ಎಚ್.ಎ.ಸರಕಾವಸ್ ಹೇಳಿದರು.

ತಹಶೀಲ್ದಾರ್ ಕಚೇರಿಯಲ್ಲಿ ಜರುಗಿದ ಹೇಮರಡ್ಡಿ ಮಲ್ಲಮ್ಮ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಹೇಮರಡ್ಡಿ ಮಲ್ಲಮ್ಮ ಅವರ ಜೀವನ ಚರಿತ್ರೆ ಮತ್ತು ಅವರ ಆದರ್ಶಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸಲು ವಿಶೇಷ ಉಪನ್ಯಾಸಕರನ್ನು ಆಹ್ವಾನಿಸಿ ಉಪನ್ಯಾಸ ಏರ್ಪಡಿಸಲಾಗುವುದು. ಎಲ್ಲಾ ಇಲಾಖೆಗಳ ಅನುಷ್ಠಾನಾಧಿಕಾರಿಗಳು ತಪ್ಪದೇ ಪಾಲ್ಗೊಳ್ಳಬೇಕು’ ಎಂದು ತಾಕೀತು ಮಾಡಿದರು.

ಸಭೆಯಲ್ಲಿ ಹಾಜರಿದ್ದ ಅಖಂಡ ಕರ್ನಾಟಕ ವೀರಶೈವ ಸಮಾಜದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನರೆಡ್ಡಿ ಅಮ್ಮಾಪುರ ಮಾತನಾಡಿ, ‘ನಗರದಲ್ಲಿ ಹೇಮರಡ್ಡಿ ಮಲ್ಲಮ್ಮ ವೃತ್ತವನ್ನು ಸ್ಥಾಪಿಸಲು ಸರ್ಕಾರಿ ನಿವೇಶನವನ್ನು ಒದಗಿಸಬೇಕು’ ಎಂದು ಮನವಿ ಮಾಡಿಕೊಂಡರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ.ನಾಯಕ, ತಾ.ಪಂ ವ್ಯವಸ್ಥಾಪಕ ವಿಜಯಕುಮಾರ ಜೋಶಿ, ಮುಖಂಡರಾದ ಮಲ್ಲು ಬಾದ್ಯಾಪುರ, ಲಕ್ಷ್ಮೀಕಾಂತ ಹವಾಲ್ದಾರ್, ಮಲ್ಲರಡ್ಡಿ ಕಮತಗಿ, ಆನಂದ ಎಂಟಮನೆ, ಯಲ್ಲಪ್ಪ ಹುಲಿಕಲ್, ನಿಂಗಣ್ಣ ಬುಡ್ಡಾ ಸೇರಿದಂತೆ ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಮತ್ತು ಸಹಾಯಕರು, ಕಂದಾಯ ಇಲಾಖೆಯ ಅಶೋಕ ಸೊನ್ನದ ಸೇರಿ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-30-2094227772

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.