ಸುರಪುರ: ‘ಐತಿಹಾಸಿಕ ಸ್ಮಾರಕಗಳು ನಮ್ಮ ಪರಂಪರೆಯ ಹೆಗ್ಗಳಿಕೆ. ಗತಕಾಲದ ಭವ್ಯ ಚರಿತ್ರೆಯನ್ನು ಪೀಳಿಗೆಯಿಂದ ಪೀಳಿಗೆಗೆ ಸಾಗಿಸುವ ಸಂದೇಹ ವಾಹಕಗಳು’ ಎಂದು ಉಪನ್ಯಾಸಕ ಸುರೇಶ ಮಾಮಡಿ ಹೇಳಿದರು.

ನಗರದ ಪ್ರಭು ಕಲಾ, ವಿಜ್ಞಾನ ಮತ್ತು ಜೆ.ಎಂ. ಬೋಹರಾ ವಾಣಿಜ್ಯ ಕಾಲೇಜು ತಾಲ್ಲೂಕಿನ ರುಕ್ಮಾಪುರ ಗ್ರಾಮದಲ್ಲಿ ಏರ್ಪಡಿಸಿರುವ ಎನ್ಎಸ್ಎಸ್ ಶಿಬಿರದಲ್ಲಿ ಶುಕ್ರವಾರ ಮಾತನಾಡಿದರು.

‘ವಿದ್ಯಾರ್ಥಿಗಳು ಇತಿಹಾಸದ ಬಗ್ಗೆ ಪ್ರೇಮ ಬೆಳೆಸಿಕೊಳ್ಳಬೇಕು. ಐತಿಹಾಸಿಕ ಶ್ರೀಮಂತಿಕೆಯನ್ನು ಸಾರುವ ದೇವಾಲಯ, ಅರಮನೆ, ಕೋಟೆ ಕೊತ್ತಲುಗಳನ್ನು ಸಂರಕ್ಷಿಸಿ ಮುಂದಿನ ತಲೆಮಾರಿಗೆ ಉಳಿಸುವ ಪ್ರತಿಜ್ಞೆ ಮಾಡಬೇಕು’ ಎಂದು ಶಿಬಿರಾರ್ಥಿಗಳಿಗೆ ಕರೆ ನೀಡಿದರು.

ಉಪನ್ಯಾಸಕ ಸಾಯಿಬಣ್ಣ ಮುಡಬೂಳ ಮಾತನಾಡಿ, ‘ಎನ್ಎಸ್ಎಸ್ ಶ್ರಮದಾನದಲ್ಲಿ ಐತಿಹಾಸಿಕ ಸ್ಮಾರಕಗಳ ಸ್ವಚ್ಛತೆ ಕಾಪಾಡಬೇಕು. ಇತಿಹಾಸದ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು’ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಎಸ್. ವಿರುಪಾಕ್ಷಿ ಮಾತನಾಡಿ, ‘ಈ ಸಲದ ಎನ್ಎಸ್ಎಸ್ ಶಿಬಿರದಲ್ಲಿ ದೇವಾಲಯ ಮತ್ತು ಸ್ಮಾರಕಗಳ ರಕ್ಷಣೆಗೆ ಹೆಚ್ಚು ಒತ್ತು ನೀಡಲಾಗಿದೆ’ ಎಂದರು.

ಉಪನ್ಯಾಸಕರಾದ ಶರಣಗೌಡ ಪಾಟೀಲ, ಶಶಿಕುಮಾರ ವೇದಿಕೆಯಲ್ಲಿದ್ದರು. ಉಪನ್ಯಾಸಕರಾದ ರಮೇಶ ಶಹಾಪುರಕರ, ಸವಿತಾ, ಮೌನೇಶ, ಶಿವಲೀಲಾ, ಅನಿತಾ, ಈರಮ್ಮ ಮತ್ತು ಶಿಬಿರಾರ್ಥಿಗಳು ಉಪಸ್ಥಿರಿದ್ದರು. ಸೃಷ್ಠಿ ನಿರೂಪಿಸಿದರು. ಸಂಗೀತಾ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-30-2094043330

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.