ಸುರಪುರ, ಹುಣಸಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ನಿಗದಿ
ಯಾದಗಿರಿ: ಜಿಲ್ಲೆಯ ಸುರಪುರ ತಾಲ್ಲೂಕಿನ 23 ಹಾಗೂ ಹುಣಸಗಿ ತಾಲ್ಲೂಕಿನ 18 ಗ್ರಾಮ ಪಂಚಾಯಿತಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಯನ್ನು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ನಿಗದಿ ಪಡಿಸಿದರು.
ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಆಡಿಟೋರಿಯಂ ಹಾಲ್‍ನಲ್ಲಿ ಗ್ರಾಮ ಪಂಚಾಯಿತಿ ನೂತನ ಸದಸ್ಯರ ಸಭೆ ಜರುಗಿಸಿ, ಅವರ ಸಮ್ಮುಖದಲ್ಲಿಯೇ ಮೀಸಲಾತಿ ನಿಗದಿಪಡಿಸಿ, ಪ್ರಕಟಿಸಿದರು.
ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಸುರಪುರ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ಹುಣಸಗಿ ತಹಶೀಲ್ದಾರ್ ವಿನಯ ಪಾಟೀಲ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.