ಸುರಪುರ: ‘ನರೇಗಾ ಯೋಜನೆಯ ಬಗ್ಗೆ ಜಾಗೃತಿ ಮೂಡಿಸಿ, ಹೆಚ್ಚಿನ ಜನರು ಕೂಲಿ ಕೆಲಸಕ್ಕೆ ಬರುವಂತೆ ಮಾಡಬೇಕು’ ಎಂದು ಜಿ.ಪಂ. ಯೋಜನಾ ನಿರ್ದೇಶಕ ಸಿ.ಬಿ. ದೇವರಮನಿ ಹೇಳಿದರು.

ಇಲ್ಲಿನ ತಾಲ್ಲೂಕು ಪಂಚಾಯಿತಿ ಸಬಾಂಗಣದಲ್ಲಿ ಬುಧವಾರ ನರೇಗಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

‘ಕಾರ್ಮಿಕರಿಗೆ ಹೆಚ್ಚಿನ ಉದ್ಯೋಗ ಒದಗಿಸುವುದು ನಿಗದಿತ ಗುರಿಗೆ ತಕ್ಕಂತೆ ಮಾನವ ದಿನಗಳ ಸೃಜನೆ ಮಾಡಬೇಕು. ಹೆಚ್ಚು ಕಾರ್ಮಿಕರು ಕೆಲಸಕ್ಕೆ ಹಾಜರಾಗಲು ಜಾಗೃತಿ ಮೂಡಿಸಬೇಕು. ಸಕಾಲಕ್ಕೆ ಕೂಲಿ ಪಾವತಿ ಮಾಡಿ, ಕಾಮಗಾರಿಗಳನ್ನು ತ್ವರಿತವಾಗಿ ಮುಕ್ತಾಯಗೊಳಿಸಬೇಕು’ ಎಂದರು.

ಕಾರ್ಮಿಕರ ಜಾಬ್ ಕಾರ್ಡ್, ಹಾಜರಾತಿ, ಜಿಯೋ ಟ್ಯಾಗಿಂಗ್, ಇ–ಕೆವೈಸಿ, ತೆರಿಗೆ ವಸೂಲಾತಿ, ಸಕಾಲ ಅರ್ಜಿಗಳ ಪರಿಶೀಲನೆ, ಸಿಬ್ಬಂದಿ ಹಾಜರಾತಿ ಸೇರಿದಂತೆ ಇತರೆ ಕಡತಗಳ ಪರಿಶೀಲನೆ ಮಾಡಿದರು.

ಸಭೆಯಲ್ಲಿ ಡಿಎಂಐಎಸ್ ರಾಘವೇಂದ್ರ, ಡಿಐಇಸಿ ಪರುಶುರಾಮ, ಟಿ.ಸಿ. ಶಿವಯೋಗಿ ಹಿರೇಮಠ, ಟಿಎಂಐಎಸ್ ವೆಂಕನಗೌಡ ಪಾಟೀಲ, ಟಿಐಇಎಸ್ ಮಲ್ಲಿಕಾರ್ಜುನ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-30-606125692

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.