ಸುರಪುರ: ಸುರಪುರ ತಹಶೀಲ್ದಾರ್ ಆಗಿ ಹುಸೇನಸಾಬ ಅಪ್ಪಾಸಾಬ್ ಸರ್ಕಾವಾಸ್ ಬುಧವಾರ ಅಧಿಕಾರ ವಹಿಸಿಕೊಂಡರು. ನೂತನ ತಹಶೀಲ್ದಾರ್ ಅವರನ್ನು ವರ್ಗಾವಣೆಗೊಂಡ ತಹಶೀಲ್ದಾರ್ ಕೆ. ವಿಜಯಕುಮಾರ ಸನ್ಮಾನಿಸಿ ಅಧಿಕಾರ ಹಸ್ತಾಂತರಿಸಿದರು.
ನೂತನ ತಹಶೀಲ್ದಾರ್ ಮಾತನಾಡಿ, ‘ನಾನು ಚಿಕ್ಕಮಗಳೂರು ಜಿಲ್ಲೆ ಕೊಪ್ಪದಿಂದ ವರ್ಗಾವಣೆಗೊಂಡು ಇಲ್ಲಿ ಅಧಿಕಾರ ವಹಿಸಿಕೊಂಡಿದ್ದೇನೆ. ಪಾರದರ್ಶಕ ಮತ್ತು ಪ್ರಾಮಾಣಿಕ ಆಡಳಿತ ನೀಡುತ್ತೇನೆ’ ಎಂದರು. ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.