ಮಂಗಳವಾರ, ಅಕ್ಟೋಬರ್ 26, 2021
21 °C

ಸುರಪುರ: ಅತ್ಯಾಚಾರ ಯತ್ನ, ಬೆಂಕಿ ಹಚ್ಚಿ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುರಪುರ (ಯಾದಗಿರಿ ಜಿಲ್ಲೆ): ವ್ಯಕ್ತಿಯೊಬ್ಬ ಮಧ್ಯರಾತ್ರಿ ಮಹಿಳೆಯ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದ ಆಕೆಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ಪ್ರಕರಣ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

‘ಗಂಗಪ್ಪ ಬಸಪ್ಪ ಅರಳೊಳ್ಳಿ ಎಂಬಾತ ಕೃತ್ಯವೆಸಗಿದ್ದು, ಆತನ ಪತ್ತೆ ಕಾರ್ಯ ನಡೆದಿದೆ’ ಎಂದು  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿ.ಬಿ.ವೇದಮೂರ್ತಿ ತಿಳಿಸಿದರು.

‘ಆರೋಪಿ ಮಹಿಳೆಯ ಮನೆಗೆ ಭಾನುವಾರ ಮಧ್ಯರಾತ್ರಿ 2 ಗಂಟೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ತಪ್ಪಿಸಿಕೊಳ್ಳಲು ಯತ್ನಿಸಿದಾಗ, ಸಿಟ್ಟಿಗೆದ್ದ ಆತ ಮನೆ ಹೊರಗಡೆ ನಿಲ್ಲಿಸಿದ್ದ ಬೈಕ್‌ನಿಂದ ಪೆಟ್ರೋಲ್ ತಂದು ಸುರಿದು ಬೆಂಕಿ ಹಚ್ಚಿದ್ದಾನೆ. ತೀವ್ರ ಗಾಯಗೊಂಡ ಆಕೆಯನ್ನು ಸುರಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ನಂತರ ಕಲಬುರ್ಗಿ ಜಿಮ್ಸ್‌ಗೆ ಕರೆದೊಯ್ಯಲಾಯಿತು’ ಎಂದು ಅವರು ಹೇಳಿದರು.

‘ಮಹಿಳೆಗೆ ಶೇ 95ರಷ್ಟು ಸುಟ್ಟಗಾಯಗಳಾಗಿದ್ದವು. ಉಳಿಸುವ ಯತ್ನ ಫಲಕಾರಿಯಾಗಲಿಲ್ಲ’ ಎಂದು ಕಲಬುರ್ಗಿ ಜಿಲ್ಲಾ ಸರ್ಜನ್ ಡಾ. ಅಂಬಾರಾಯ ರುದ್ರವಾಡಿ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು