ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸುರಪುರ: ಬೆಳೆ ಸಮೀಕ್ಷೆ ಕಾರ್ಯ ಆರಂಭ

Published 22 ಆಗಸ್ಟ್ 2024, 16:10 IST
Last Updated 22 ಆಗಸ್ಟ್ 2024, 16:10 IST
ಅಕ್ಷರ ಗಾತ್ರ

ಸುರಪುರ: ‘ಕೃಷಿ ಇಲಾಖೆಯೊಂದಿಗೆ ಕಂದಾಯ ಇಲಾಖೆ ಬೆಳೆ ಸಮೀಕ್ಷೆ ಕಾರ್ಯ ನಡೆಸುತ್ತಿದೆ. ರೈತರು ತಪ್ಪದೇ ಆ್ಯಪ್ ಮೂಲಕ ತಮ್ಮ ಜಮೀನಿನ ಬೆಳೆ ನಮೂದಿಸಬೇಕು. ಬೆಳೆ ಹಾನಿ ಸಂಭವಿಸಿದಲ್ಲಿ ಪರಿಹಾರ ಪಡೆಯಲು ಇದು ನೆರವಾಗುತ್ತದೆ’ ಎಂದು ತಹಶೀಲ್ದಾರ್ ಕೆ.ವಿಜಯಕುಮಾರ ಹೇಳಿದರು.

ತಾಲ್ಲೂಕಿನ ಶೆಳ್ಳಗಿ ಗ್ರಾಮದಲ್ಲಿ ಗುರುವಾರ ಬೆಳೆ ಸಮೀಕ್ಷೆ ಕಾರ್ಯ ವೀಕ್ಷಿಸಿ ಅವರು ಮಾತನಾಡಿದರು.

‘ಕೃಷಿ ಮತ್ತು ಕಂದಾಯ ಇಲಾಖೆ ನೇಮಕ ಮಾಡಿದ ಖಾಸಗಿ ನಿವಾಸಿಗಳು ಬೆಳೆ ಸಮೀಕ್ಷೆ ಮಾಡಲು ತಮ್ಮ ಹೊಲಗಳಿಗೆ ಬಂದಾಗ ರೈತರು ಸಹಕರಿಸಬೇಕು. ಅವರಿಗೆ ಸಮರ್ಪಕ ಮಾಹಿತಿ ನೀಡಬೇಕು’ ಎಂದು ತಿಳಿಸಿದರು.

ಸಹಾಯಕ ಕೃಷಿ ನಿರ್ದೇಶಕ ಭೀಮರಾಯ ಹವಾಲ್ದಾರ್ ಮಾತನಾಡಿ, ‘ಸುರಪುರ ಮತ್ತು ಹುಣಸಗಿ ತಾಲ್ಲೂಕಿನಲ್ಲಿ ಬೆಳೆ ಸಮೀಕ್ಷೆ ಮಾಡಲು 155 ಖಾಸಗಿ ನಿವಾಸಿಗಳನ್ನು ನೇಮಿಸಲಾಗಿದೆ. ರೈತರು ಗೂಗಲ್ ಸ್ಟೋರ್‌ನಲ್ಲಿ ‘ರೈತರ ಆ್ಯಪ್’ ಡೌನ್‍ಲೋಡ್ ಮಾಡಿಕೊಂಡು ಅದರಲ್ಲಿ ಖುದ್ದಾಗಿ ಬೆಳೆ ನಮೂದು ಮಾಡಬಹುದು’ ಎಂದರು.

‘ಸುರಪುರ ಮತ್ತು ಹುಣಸಗಿ ತಾಲ್ಲೂಕಿನಲ್ಲಿ 1,55,767 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ. ‘ನನ್ನ ಬೆಳೆ ನನ್ನ ಸಮೀಕ್ಷೆ’ ಎಂಬ ಧ್ಯೇಯವಾಕ್ಯ ಇದೆ. ರೈತರು ಸಹಕರಿಸಿ ಬೆಳೆ ನಮೂದು ಮಾಡಬೇಕು. ‘ಬೆಳೆ ದರ್ಶಕ’ ಆ್ಯಪ್‍ನಲ್ಲಿ ತಾವು ಅಥವಾ ಖಾಸಗಿ ನಿವಾಸಿ ನಮೂದಿಸಿದ ಬೆಳೆ ಮಾಹಿತಿ ಸರಿಯಾಗಿದೆಯೇ ಎಂದು ಪರಿಶೀಲಿಸಿಕೊಳ್ಳಬಹುದು’ ಎಂದರು.

‘ವ್ಯತ್ಯಾಸ ಕಂಡು ಬಂದಲ್ಲಿ ಆಕ್ಷೇಪಣೆ ಸಲ್ಲಿಸುವ ಅವಕಾಶ ಇದೆ. ಅಂತಹ ಸಂದರ್ಭದಲ್ಲಿ ಪುನಃ ಸಮೀಕ್ಷೆ ನಡೆಸಿ ಸರಿಪಡಿಸಲಾಗುವುದು’ ಎಂದರು.

‘ಬೆಳೆ ವಿಮೆ, ಕನಿಷ್ಠ ಬೆಂಬಲ ಬೆಲೆ, ಬೆಳೆ ಪರಿಹಾರ, ಬ್ಯಾಂಕ್ ಸಾಲ ಇತರ ಕಾರ್ಯಗಳಿಗೆ ಬೆಳೆ ಸಮೀಕ್ಷೆ ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗೆ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಮಾಹಿತಿ ಪಡೆಯಬಹುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT