ಶುಕ್ರವಾರ, ಜುಲೈ 30, 2021
21 °C

ಹುಣಸಗಿ: ವಿದ್ಯಾರ್ಥಿಗಳಿಗೆ ಟ್ಯಾಬ್‌ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಣಸಗಿ: ‘ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದುಕೊಳ್ಳಬೇಕು‘ ಎಂದು ಶಾಸಕ ರಾಜುಗೌಡ ಸಲಹೆ ನೀಡಿದರು.

ಹುಣಸಗಿ ಪಟ್ಟಣದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಬುಧವಾರ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡಲಾಗುತ್ತಿರುವ ಟ್ಯಾಬ್ ವಿತರಿಸಿ ಮಾತನಾಡಿದರು.

ಇಂದಿನ ಕೋವಿಡ್ ಸಂಕಷ್ಟದ ದಿನಗಳಲ್ಲಿ ಆನ್‌ಲೈನ್ ಶಿಕ್ಷಣ ಅತ್ಯವಶ್ಯಕ ಮಹತ್ವದ ಪಾತ್ರ ವಹಿಸುತ್ತಿದೆ. ಈ ಹಂತದಲ್ಲಿಯೇ ಸರ್ಕಾರದಿಂದ ಟ್ಯಾಬ್‌ಗಳನ್ನು ನೀಡುವ ಮೂಲಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ತಯಾರು ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಮೋಬೈಲ್, ಟ್ಯಾಬ್‌ಗಳಲ್ಲಿ ಎಲ್ಲವೂ ಅಡಗಿರುತ್ತದೆ. ಆದರೆ ವಿದ್ಯಾರ್ಥಿ ಜೀವನಕ್ಕೆ ಬೇಕಾದ ಉಪಯುಕ್ತ ಪುಸ್ತಕಗಳನ್ನು ಅಧ್ಯಯನ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪ್ರಾಚಾರ್ಯ ಚನ್ನಬಸಯ್ಯ ಹಿರೇಮಠ ಮಾತನಾಡಿ, ಹುಣಸಗಿ ಪಟ್ಟಣದ ಸರ್ಕಾರಿ ಪದವಿ ಕಾಲೇಜನಲ್ಲಿ ಸ್ಥಳಾವಕಾಶದ ಕೊರತೆ ಸಾಕಷ್ಟು ಇದೆ. ಇದ್ದುದರಲ್ಲಿಯೇ ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ಪೂರಕ ವಾತಾವರಣ ಕಲ್ಪಿಸಲಾಗಿದೆ. ಆದ್ದರಿಂದ ಪಟ್ಟಣದ ಹೊರವಲಯದಲ್ಲಿ ನಿರ್ಮಿಸಲಾಗುತ್ತಿರುವ ಕಾಲೇಜು ಕಟ್ಟಡವನ್ನು ಶಿಘ್ರದಲ್ಲಿಯೇ ಪೂರ್ಣಗೊಳಿಸಬೇಕು ಎಂದು ಮನವಿ ಮಾಡಿದರು.

ಒಟ್ಟು 80 ವಿದ್ಯಾರ್ಥಿಗಳಲ್ಲಿ 10 ವಿದ್ಯಾರ್ಥಿಗಳಿಗೆ ಬುಧವಾರ ಸಾಂಕೇತಿಕವಾಗಿ ಟ್ಯಾಬ್ ನೀಡಲಾಯಿತು.

ಜಾನಪದ ಅಕಾಡೆಮಿ ಸದಸ್ಯ ಅಮರಯ್ಯಸ್ವಾಮಿ ಜಾಲಿಬೆಂಚಿ, ಜಿಪಂ ಮಾಜಿ ಸದಸ್ಯ ಬಸವರಾಜಸ್ವಾಮಿ ಸ್ಥಾವರಮಠ, ವಿರೇಶ ಚಿಂಚೊಳಿ, ಸಂಗಣ್ಣ ವೈಲಿ, ಮೇಲಪ್ಪ ಗುಳಗಿ ಸೇರಿದಂತೆ ಇತರರು ಇದ್ದರು.

ಡಾ.ಜಗದೀಶ ನಾಯಕ ಸ್ವಾಗತಿಸಿದರು. ವಿರೇಂದ್ರ ಪಾಟೀಲ ವಂದಿಸಿದರು. ಸಂತೋಷ ನಡಿಹಾಳ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು