ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನುಗಳ ಸೌಲಭ್ಯ ಪಡೆಯಿರಿ: ನ್ಯಾಯಾಧೀಶ ಶಿವನಗೌಡ

ಕಾನೂನು ಸಾಕ್ಷರತಾ ರಥ ಸಂಚಾರಕ್ಕೆ ನ್ಯಾಯಾಧೀಶ ಶಿವನಗೌಡ ಚಾಲನೆ
Last Updated 23 ಜನವರಿ 2020, 15:37 IST
ಅಕ್ಷರ ಗಾತ್ರ

ಯಾದಗಿರಿ: ಕಾನೂನು ಸೇವೆಗಳ ಪ್ರಾಧಿಕಾರದ ಉದ್ದೇಶಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಹಾಗೂ ಅರ್ಥಪೂರ್ಣವಾಗಿ ಗ್ರಾಮಾಂತರ ಜನರಿಗೆ ತಲುಪಿಸಲು ಕಾನೂನು ಸಾಕ್ಷರತಾ ರಥ ಹಾಗೂ ಸಂಚಾರಿ ಜನತಾ ನ್ಯಾಯಾಲಯದ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಸಾಕ್ಷರತಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸದುಪಯೋಗ ಪಡೆದು ಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅಧ್ಯಕ್ಷ ಶಿವನಗೌಡ ಸಲಹೆ ನೀಡಿದರು.

ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ, ಕಂದಾಯ ಇಲಾಖೆ, ತಾಲ್ಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆಗಳ ವತಿಯಿಂದ ಜಿಲ್ಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿರುವ ಕಾನೂನು ಸಾಕ್ಷರತಾ ರಥ ಹಾಗೂ ಸಂಚಾರಿ ಜನತಾ ನ್ಯಾಯಾಲಯದ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಾಹನವು ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ 4 ದಿನಗಳಂತೆ ಜನವರಿ 21ರಿಂದ ಫೆಬ್ರುವರಿ 7ರವರೆಗೆ ಸಂಚರಿಸಲಿದೆ. ತಾಲ್ಲೂಕಿನಲ್ಲಿ ಜನವರಿ 21ರಿಂದ 24ರವರೆಗೆ ಸಾಕ್ಷರತಾ ರಥ ಸಂಚಾರ ಮಾಡಲಿದೆ. ದಿನಕ್ಕೆ ಮೂರು ಕಾನೂನು ಸಾಕ್ಷರತಾ ಕಾರ್ಯಕ್ರಮಗಳನ್ನು ಹಮ್ಮಿಕೊ ಳ್ಳಲಾಗುವುದು. ಪೊಲೀಸ್ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳಿಂದ ಅಗತ್ಯ ಸಹಕಾರ ದೊರೆಯುತ್ತಿದ್ದು, ಅಭಿಯಾನದಲ್ಲಿ ಅಧಿಕಾರಿಗಳು ವಿವಿಧ ಯೋಜನೆಗಳ ಕುರಿತು ಪ್ರಚಾರ ಮಾಡುವರು ಎಂದು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ನಾಮದೇವ ಕೆ.ಸಾಲಮಂಟಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೊಡೆ, ಸಿವಿಲ್ ನ್ಯಾಯಾಧೀಶ ಲೋಕೇಶ್ ಧನಪಾಲ ಹವಲೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಸ್ಮೀತಾ ಮಾಲಗಾಂವೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಕ್ಯಾತನಾಳ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶಾರಾಭಾಯ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಶರಣಪ್ಪ ಪಾಟೀಲ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಸಿ.ಎಸ್.ಮಾಲಿಪಾಟೀಲ, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ನಾಗಯ್ಯ ಗುತ್ತೇದಾರ, ವಕೀಲರಾದ ಗೋವಿಂದ ಜಾಧವ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT