ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚುನಾವಣೆಗಳನ್ನು ಸವಾಲಾಗಿ ಸ್ವೀಕರಿಸಿ: ಈಶ್ವರಸಿಂಗ್‌ ಠಾಕೂರ

Published 13 ಮಾರ್ಚ್ 2024, 15:29 IST
Last Updated 13 ಮಾರ್ಚ್ 2024, 15:29 IST
ಅಕ್ಷರ ಗಾತ್ರ

ಸುರಪುರ: ‘ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆದಿದೆ. ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡಲು ದೇಶವೇ ಕಾತರದಿಂದ ಕಾಯುತ್ತಿದೆ. ಜತೆಯಲ್ಲೇ ಸುರಪುರ ಕ್ಷೇತ್ರದ ವಿಧಾನಸಭೆ ಚುನಾವಣೆ ಎದುರಿಸುವುದು ಕೂಡಾ ನಮಗೆ ಅನಿವಾರ್ಯವಾಗಿದೆ. ಈ ಎರಡು ಚುನಾವಣೆಗಳನ್ನು ಕಾರ್ಯಕರ್ತರು ಸವಾಲಾಗಿ ಸ್ವೀಕರಿಸಬೇಕು’ ಎಂದು ಲೋಕಸಭಾ ಚುನಾವಣೆ ಕಲಬುರಗಿ ವಿಭಾಗೀಯ ಸಹ ಪ್ರಭಾರಿ ಈಶ್ವರಸಿಂಗ್‌ ಠಾಕೂರ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಲೋಕಸಭೆ ಚುನಾವಣೆ ಅಂಗವಾಗಿ ನಡೆದ ಫಲಾನುಭವಿ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.

‘ಕಾರ್ಯಕರ್ತರು ಗ್ರಾಮ ಚಲೋ ಅಭಿಯಾನ ಹಮ್ಮಿ ಕೊಳ್ಳಬೇಕು. ಆ ಮೂಲಕ ಮನೆ ಮನೆಗೆ ಹೋಗಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮತ್ತು ಮೋದಿ ಅವರ ಕಾರ್ಯವೈಖರಿ ಮತ್ತು ಕ್ಷೇತ್ರದಲ್ಲಿ ರಾಜೂಗೌಡ ಅವರು ಮಾಡಿರುವ ಜನಪರ ಕೆಲಸಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು’ ಎಂದು ಕರೆ ನೀಡಿದರು.

‘ಸುರಪುರ ವಿಧಾನಸಭೆ ಕ್ಷೇತ್ರಕ್ಕೆ ರಾಜುಗೌಡರೇ ಅಭ್ಯರ್ಥಿ ಎಂದು ಪಕ್ಷ ಘೋಷಿಸಿದೆ. ರಾಯಚೂರು ಲೋಕಸಭೆ ಕ್ಷೇತ್ರಕ್ಕೆ ಯಾರೇ ಅಭ್ಯರ್ಥಿಯಾಗಲಿ ಇವರಿಬ್ಬರ ಪರವಾಗಿ ಕಾರ್ಯಕರ್ತರು ಮುಖಂಡರು ಒಟ್ಟಾಗಿ ಕೆಲಸ ಮಾಡಿ ಇಬ್ಬರೂ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.

ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ರಾಜೂಗೌಡ ಮಾತನಾಡಿ, ‘ವಿಧಾನಸಭೆಯ ಮರು ಚುನಾವಣೆಗೆ ಎರಡು ಮೂರು ದಿನಗಳಲ್ಲಿ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ. ನಮ್ಮೆಲ್ಲರ ಗುರಿ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡುವುದು. ಕಹಿ ಘಟನೆಗಳನ್ನು ಮರೆತು ತಪ್ಪುಗಳನ್ನು ತಿದ್ದಿಕೊಳ್ಳೋಣ. ಎರಡು ಚುನಾವಣೆಗಳನ್ನು ಸಮರ್ಥವಾಗಿ ಎದುರಿಸೋಣ’ ಎಂದು ಮನವಿ ಮಾಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಅಮೀನರೆಡ್ಡಿ ಪಾಟೀಲ ಯಾಳಗಿ, ಮಂಡಲ ಅಧ್ಯಕ್ಷ ಮೇಲಪ್ಪ ಗುಳಗಿ ಮಾತನಾಡಿದರು. ಪ್ರಮುಖರಾದ ಯಲ್ಲಪ್ಪ ಕುರುಕುಂದಿ, ರಾಜಾ ಹನುಮಪ್ಪ ನಾಯಕ ತಾತಾ, ಎಚ್.ಸಿ. ಪಾಟೀಲ, ರಾಜಾ ಮುಕುಂದನಾಯಕ, ಮಾನಪ್ಪ ಸಾಹು ಆಲ್ದಾಳ, ದುರ್ಗಪ್ಪ ಗೋಗಿಕೇರಾ, ರಂಗನಗೌಡ ದೇವಿಕೇರಿ, ಪರುಶುರಾಮ ಕುರುಕುಂದಿ, ಗುರು ಕಾಮಾ, ಶ್ರೀನಿವಾಸ ರಫುಗಾರ ಸೇರಿದಂತೆ ಅನೇಕ ಕಾರ್ಯಕರ್ತರು ಮುಖಂಡರು ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT