ಬುಧವಾರ, ಸೆಪ್ಟೆಂಬರ್ 22, 2021
29 °C

ಹೃದಯಾಘಾತದಿಂದ ತಾಲೂಕು ಪಂಚಾಯಿತಿ ಸದಸ್ಯ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗುರುಮಠಕಲ್: ರಕ್ತದೊತ್ತಡದ ಸಮಸ್ಯೆಯಿಂದ (ಲೋ ಬಿಪಿ) ಅನಾರೋಗ್ಯಕ್ಕೆ ಈಡಾಗಿದ್ದ ಚಂಡರಕಿ ಗ್ರಾಮದ ತಾಲ್ಲೂಕು ಪಂಚಾಯಿತಿ ಸದಸ್ಯ ನಾಗೇಂದ್ರಪ್ಪ ಪೀರಮ್ಮೋಳ (36) ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಎರಡು ದಿನಗಳ ಹಿಂದೆ ಲೋ ಬಿಪಿ ಕಾರಣ ತಲೆಸುತ್ತಿ ಬಿದ್ದಿದ್ದರು. ನಂತರ ಚೇತರಿಸಿಕೊಂಡಿದ್ದ ಅವರಿಗೆ ಭಾನುವಾರ ಮತ್ತೆ ರಕ್ತದೊತ್ತಡದ ಸಮಸ್ಯೆ ಕಾಣಿಸಿಕೊಂಡಿದ್ದು, ಕಲಬುರ್ಗಿಯ ಚಿರಾಯು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ತೀವ್ರ ಹೃದಯಾಘಾತ ಉಂಟಾದ ಕಾರಣ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸೋಮವಾರ ಬೆಳಿಗ್ಗೆ 11ಕ್ಕೆ ಚಂಡರಕಿ ಗ್ರಾಮದಲ್ಲಿ ಅಂತ್ಯಕ್ರಿಯೆ ಜರುಗಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು