ಸುರಪುರ : ‘ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ, ಸಂಸ್ಕೃತಿ ಕಲಿಸಬೇಕು. ಮಕ್ಕಳು ತಂದೆ-ತಾಯಂದಿರನ್ನು ಪ್ರೀತಿಸಬೇಕು. ಪಾಲಕರ ಕಣ್ಣಲ್ಲಿ ಎಂದೂ ನೀರು ತರಿಸಬಾರದು. ಮಾತೃ ಭಾಷೆಯನ್ನು ಪ್ರೀತಿಸಬೇಕು. ಜನ್ಮಭೂಮಿಗೆ ಋಣಿಯಾಗಿರಬೇಕು’ ಎಂದು ಶಿಕ್ಷಣ ತಜ್ಞ ಗುರುರಾಜ ಕರಜಗಿ ಹೇಳಿದರು.

ಸಮೀಪದ ಹಸನಾಪುರದ ತಕ್ಷಶಿಲಾ ಇಂಟರ್ನ್ಯಾಷನಲ್ ಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ತಕ್ಷ ಉತ್ಸವದಲ್ಲಿ ಅವರು ಮಾತನಾಡಿದರು.

ಡಿಡಿಪಿಐ ಚನ್ನಬಸಪ್ಪ ಮುಧೋಳ ಮಾತನಾಡಿ, ‘ಯಾದಗರಿ ಜಿಲ್ಲೆ ಶೈಕ್ಷಣಿಕ ಕ್ಷೇತ್ರದಲ್ಲಿ ಹಿಂದುಳಿದಿಲ್ಲ. ಹಿಂದುಳಿದಿದ್ದು ಮನಸ್ಥಿತಿ. ಕಾರಣ ಅದರ ಬದಲಾವಣೆ ಅಗತ್ಯವಾಗಿದೆ. ಇಲ್ಲಿಯವರಿಗೆ ಸಾಧಿಸುವ ಛಲ ಇದೆ. ಮನೋಭೂಮಿಕೆ ಬದಲಾಯಿಸಿ ಮುನ್ನಡೆದಿದೆಯಾದರೆ ಖಂಡಿತವಾಗಿ ಯಶಸ್ಸು ಸಾಧಿಸಬಹುದು’ ಎಂದರು.

ಡಿವೈಎಸ್ಪಿ ಜಾವೇದ್ ಇನಾಂದಾರ್ ಮಾತನಾಡಿ, ‘ವಿದ್ಯಾರ್ಥಿಗಳು ಶಿಸ್ತು, ಸಮಯ ಪಾಲಿಸಬೇಕು. ಪೋಷಕರು ಮತ್ತು ಶಿಕ್ಷಕರ ಮಾರ್ಗದರ್ಶನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದರು.

ವೈ.ವರದರಾಜ್ ಶೈಕ್ಷಣಿಕ ಮತ್ತು ಸಂಸ್ಕೃತಿಕ ಟ್ರಸ್ಟ್ ಅಧ್ಯಕ್ಷೆ ಅಂಬಿಕಾ ಯನಗುಂಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಲಬುರಗಿಯ ಚೌವುದಾಪುರಿ ಹಿರೇಮಠದ ರಾಜಶೇಖರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಸಂದೇಶ ನೀಡಿದರು.

ಸಂಸ್ಥಾನಿಕ ರಾಜಾ ಲಕ್ಷ್ಮೀ ನಾರಾಯಣ ನಾಯಕ ಉದ್ಘಾಟಿಸಿದರು. ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜಾ ಕುಮಾರ ನಾಯಕ, ಉದ್ಯಮಿ ಗ್ಯಾನಚಂದ್ ಜೈನ್, ಬಿಇಒ ಯಲ್ಲಪ್ಪ ಕಾಡ್ಲೂರ, ಪಿಐ ಉಮೇಶ್ ನಾಯಕ, ಮುಖಂಡ ಮೇಲಪ್ಪ ಗುಳಗಿ ವೇದಿಕೆಯಲ್ಲಿದ್ದರು.

ಮುಕುಂದ ಯನಗುಂಟಿ, ಟ್ರಸ್ಟನ್ ಕಾರ್ಯದರ್ಶಿ ಗೌರಿಶಂಕರ ಯನಗುಂಟಿ ಸೇರಿ ಅನೇಕ ಪ್ರಮುಖರು ಇದ್ದರು. ಮುಖ್ಯ ಶಿಕ್ಷಕ ರಾಕೇಶ್ ನಾಯರ್ ಶಾಲೆಯ ಪ್ರಗತಿ ವರದಿ ವಾಚಿಸಿದರು. ಅಮರಯ್ಯಸ್ವಾಮಿ ಜಾಲಿಬೆಂಚಿ ನಿರೂಪಿಸಿದರು. ಮಕ್ಕಳಿಂದ ನೃತ್ಯ, ಸಂಗೀತ, ಹಾಡುಗಾರಿಕೆ ಸೇರಿ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ನಡೆದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.