ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ಮತಕ್ಷೇತ್ರ: ಕರಡು ಮತದಾರರ ಪಟ್ಟಿ ಪ್ರಕಟ

Last Updated 16 ಡಿಸೆಂಬರ್ 2019, 10:28 IST
ಅಕ್ಷರ ಗಾತ್ರ

ಯಾದಗಿರಿ: ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ಡಿಸೆಂಬರ್ 7ರಂದು ಸಹಾಯಕ ಮತದಾರರ ನೋಂದಣಾಧಿಕಾರಿ, ತಹಶೀಲ್ದಾರ್ ಕಚೇರಿ ಮತ್ತು ನಿಗದಿತ ಸ್ಥಳಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಹ ಮತದಾರರು ಡಿಸೆಂಬರ್ 23ರವರೆಗೆ ತಮ್ಮ ಹೆಸರು ಸೇರ್ಪಡೆ, ತಿದ್ದುಪಡಿ ಇತ್ಯಾದಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. 01.11.2019ರ ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಈ ಹಿಂದೆ ನವೆಂಬರ್ 6ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಜಿಲ್ಲೆಯಲ್ಲಿ ಒಟ್ಟು 1,394 ಮತದಾರರು ತಮ್ಮ ಹೆಸರು ಸೇರ್ಪಡೆ ಮಾಡಿಕೊಂಡಿರುತ್ತಾರೆ. ಇವರ ಪೈಕಿ 1,039 ಪುರುಷರು ಹಾಗೂ 355 ಮಹಿಳಾ ಮತದಾರರು ಇದ್ದಾರೆ.

ಕರಡು ಮತದಾರರ ಪಟ್ಟಿಯಲ್ಲಿ ಇನ್ನೂ ಹೆಸರು ಸೇರ್ಪಡೆಯಾಗದೇ ಉಳಿದಿರುವ ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಭಾರತದಪ್ರಜೆಯಾಗಿರಬೇಕು. ಆ ಕ್ಷೇತ್ರದ ಸಾಮಾನ್ಯ ನಿವಾಸಿಯಾಗಿರುವ ಮತ್ತು 01.11.2019ಕ್ಕೆ ಹಿಂದಿನ 6 ವರ್ಷದ ಅವಧಿಯಲ್ಲಿ ಪ್ರೌಢಶಾಲೆಗಿಂತ ಕಡಿಮೆಯಿಲ್ಲದ ದರ್ಜೆಯಲ್ಲಿ ರಾಜ್ಯದ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಕನಿಷ್ಠ 3 ವರ್ಷ ಬೋಧನಾ ವೃತ್ತಿಯಲ್ಲಿ ನಿರತನಾಗಿರಬೇಕು. ಬೋಧನಾ ವೃತ್ತಿ ಕುರಿತು ಸಂಬಂಧಿಸಿದ ಸಂಸ್ಥೆಯಿಂದ ಅನುಬಂಧ-2ರಲ್ಲಿ ಪ್ರಮಾಣ ಪತ್ರ ಒದಗಿಸುವುದು ಕಡ್ಡಾಯವಾಗಿರುತ್ತದೆ. ಆದ್ದರಿಂದ ಜಿಲ್ಲೆಯಲ್ಲಿ ಇರುವ ಎಲ್ಲಾ ಅರ್ಹ ಮತದಾರರು ಡಿ.23ರ ಒಳಗೆ ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರ್ಪಡೆ ಮಾಡಲು ನಮೂನೆ-19ರಲ್ಲಿ ಸರಿಯಾದ ಮಾಹಿತಿ ಭರ್ತಿಮಾಡಿ ಅಗತ್ಯ ದಾಖಲೆಗಳೊಂದಿಗೆ ಸಹಾಯಕ ಮತದಾರರ ನೋಂದಣಾಧಿಕಾರಿ ಅಥವಾ ನಿಗದಿತ ಅಧಿಕಾರಿಗಳಾದ ತಹಶೀಲ್ದಾರ್ ಕಚೇರಿಗೆ ಸಲ್ಲಿಸಲು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT