ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಿಯೋಜನೆ ಮೇಲೆ ತೆರಳಿದ ಶಿಕ್ಷಕಿ: ವಾಪಸ್ಸಿಗೆ ಕ್ರಮ

Published 14 ಮಾರ್ಚ್ 2024, 15:46 IST
Last Updated 14 ಮಾರ್ಚ್ 2024, 15:46 IST
ಅಕ್ಷರ ಗಾತ್ರ

ಶಹಾಪುರ: ವಡಗೇರಾ ತಾಲ್ಲೂಕಿನ ತಡಿಬಿಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆಯ ನಡುವೆ ಶಾಲೆಯ ಸಹ ಶಿಕ್ಷಕಿ ಪಾರ್ವತಿ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನಿಯೋಜನೆ ಮೇಲೆ ಕಳುಹಿಸಲಾಗಿದ್ದು, ಅವರನ್ನು ಮೂಲ ಹುದ್ದೆಯಲ್ಲಿಯೇ ಮುಂದುವರೆಸುವಂತೆ ಪತ್ರ ಬರೆಯಲಾಗುವುದು ಎಂದು ಬಿಇಒ ಶಿಬಾ ಜಲಿಯನ್ ತಿಳಿಸಿದ್ದಾರೆ.

ಮೂರು ವರ್ಷದ ಹಿಂದೆ ಶಿಕ್ಷಕಿಯು ನಿಯೋಜನೆ ಮೇಲೆ ತೆರಳಿದ್ದಾರೆ. ಶಾಲೆಯಲ್ಲಿ 590 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಕೇವಲ ನಾಲ್ಕು ಜನ ಶಿಕ್ಷಕರು ಇದ್ದಾರೆ. ಶಿಕ್ಷಕರ ಕೊರತೆ ನಡುವೆ ಶಿಕ್ಷಕಿಯನ್ನು ನಿಯೋಜನೆ ಮೇಲೆ ಕಳುಹಿಸಿದ ಕ್ರಮವು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಬಿಇಒ, ಸರ್ಕಾರದ ಆದೇಶ ಪಾಲನೆ ಮಾಡುವುದು ಅನಿವಾರ್ಯ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT