ಚುನಾವಣಾ ಕರ್ತವ್ಯ ಲೋಪ: ಶಿಕ್ಷಕ ಅಮಾನತು

ಶನಿವಾರ, ಏಪ್ರಿಲ್ 20, 2019
31 °C

ಚುನಾವಣಾ ಕರ್ತವ್ಯ ಲೋಪ: ಶಿಕ್ಷಕ ಅಮಾನತು

Published:
Updated:

ಯಾದಗಿರಿ: ಚುನಾವಣಾ ಕರ್ತವ್ಯ ಲೋಪ ಎಸಗಿರುವ ಹಿನ್ನೆಲೆಯಲ್ಲಿ ಶಹಾಪುರ ತಾಲ್ಲೂಕಿನ ಕಂಚನಕವಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಬಸವಂತ್ರಾಯಗೌಡ ಅವರನ್ನು ಅಮಾನತುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್.ಬಿರಾದಾರ ಆದೇಶ ಹೊರಡಿಸಿದ್ದಾರೆ.

ಲೋಕಸಭಾ ಚುನಾವಣೆಗೆ ಬಸವಂತ್ರಾಯಗೌಡ ಅವರನ್ನು ಎಪಿಆರ್‌ಓ ಎಂದು ಚುನಾವಣಾ ಕಾರ್ಯಕ್ಕೆ ನಿಯೋಜಿಸಿ ಆದೇಶ ಮಾಡಲಾಗಿತ್ತು. ಆದರೆ, ಮಾರ್ಚ್ 14ರಿಂದ ಅನಧಿಕೃತ ಗೈರು ಹಾಜರಾಗಿದ್ದು, ಎಪಿಆರ್‌ಓ ಆದೇಶ ಪತ್ರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಿಕ್ಷಕನ ಮನೆ ವಿಳಾಸ, ಫೋನ್ ನಂಬರ್‌ ಸಂಪರ್ಕಿಸಿದರೂ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಬೇಜವಾಬ್ದಾರಿತನ ಹಾಗೂ ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !