ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ಯಾರಂಟಿ ಯೋಜನೆ ಜಾರಿಯಿಂದ ಟಿ.ವಿ ಬಾಯಿ ಬಂದ್: ದರ್ಶನಾಪುರ

Published 3 ಜೂನ್ 2023, 11:25 IST
Last Updated 3 ಜೂನ್ 2023, 11:25 IST
ಅಕ್ಷರ ಗಾತ್ರ

ಶಹಾಪುರ (ಯಾದಗಿರಿ): ಬಿಜೆಪಿ ಪಕ್ಷಕಿಂತ ಟಿವಿ ಮಾಧ್ಯಮದವರಿಗೆ ಕಾಂಗ್ರೆಸ್ ಗ್ಯಾರಂಟಿ ಯೋಜನೆ ಜಾರಿ ಚಿಂತೆ ಜಾಸ್ತಿಯಾಗಿದೆ ಎಂದು ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪುರ ಮಾಧ್ಯಮಗಳ ವಿರುದ್ಧ ಹರಿಹಾಯ್ದರು.

ನಗರದಲ್ಲಿ ಶನಿವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಳನ್ನು ವಾರದಲ್ಲಿ ಜಾರಿ ಮಾಡಲು ಅವಕಾಶ ಮಾಡಿಕೊಡದೆ ಜನರಲ್ಲಿ ಅನಾವಶ್ಯಕ ಗೊಂದಲ ಉಂಟು ಮಾಡಿದರು. ಆದರೆ, ಒಂದು ದಿನವೂ ಬಿಜೆಪಿ ಕಪ್ಪು ಹಣ ತರುವ ಬಗ್ಗೆ, ಬೆಲೆ ಏರಿಕೆ ವಿರುದ್ಧ ಟಿವಿ ಮಾಧ್ಯಮದವರು ಚಕಾರ ಎತ್ತಲಿಲ್ಲ ಎಂದು ಆರೋಪಿಸಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಕನಿಷ್ಠ ಜ್ಞಾನವಿಲ್ಲ. ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡಿದರೆ ನಮಗೆ ಉಪಯೋಗವಿಲ್ಲ ಎನ್ನುತ್ತಾರೆ. ಖಾಸಗಿ ಬಸ್‌ಗಳಿವೆ ಎನ್ನುವುದು ಹಾಸ್ಯಸ್ಪದ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT