ಶನಿವಾರ, ಸೆಪ್ಟೆಂಬರ್ 19, 2020
22 °C
4 ತಿಂಗಳಿನಿಂದ ಬಂದ್‌ ಆಗಿದ್ದ ದೇವಸ್ಥಾನ, ಇಂದಿನಿಂದ ದರ್ಶನಕ್ಕೆ ಅವಕಾಶ

ಶ್ರೀಶೈಲಂ ಮಲ್ಲಿಕಾರ್ಜುನ ದೇವಸ್ಥಾನ: ಭಕ್ತರಿಗೆ ದರ್ಶನ ಭಾಗ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ಕಳೆದ 4 ತಿಂಗಳಿನಿಂದ ಕೊರೊನಾ ವೈರಸ್‌ ಹಾವಳಿಯಿಂದ ದೇಶದ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ನೆರೆಯ ಆಂಧ್ರಪ್ರದೇಶದ ಕರ್ನೂಲ್‌ ಜಿಲ್ಲೆಯ ಶ್ರೀಶೈಲಂ ಭ್ರಮರಾಂಭ ಮಲ್ಲಿಕಾರ್ಜುನ ದೇವಸ್ಥಾನವನ್ನು ಮುಚ್ಚಲಾಗಿತ್ತು. ಆದರೆ, ದೇವಸ್ಥಾನ ಆಡಳಿತ ಮಂಡಳಿ ಶುಕ್ರವಾರ ದೇವಸ್ಥಾನವನ್ನು ಸಂಪೂರ್ಣ ಸ್ಯಾನಿಟೈಸ್‌ ಮಾಡಿ ಶನಿವಾರ ಬೆಳಿಗ್ಗೆಯಿಂದ ಭಕ್ತರು ದರ್ಶನ ಪಡೆಯಲು ಅವಕಾಶ ಕಲ್ಪಿಸಿದೆ.

ಶ್ರಾವಣ ಮಾಸ ಹಿಂದೂಗಳಿಗೆ ಪವಿತ್ರವಾಗಿದೆ. ಈ ವೇಳೆ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಜನರು ಶ್ರೀಶೈಲಂಗೆ ಭೇಟಿ ನೀಡುತ್ತಾರೆ. ಸಪ್ತ ನದಿಗಳ ಸಂಗಮ ಪಾತಾಳಗಂಗೆಯಲ್ಲಿ ಪುಣ್ಯಸ್ನಾನ ಮಾಡಿ ಸಾಕ್ಷಿ ಗಣಪತಿ, ಭ್ರಮರಾಂಭ ಮಲ್ಲಿಕಾರ್ಜುನ ಸ್ವಾಮಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ, ಶಿಖರೇಶ್ವರ ಸೇರಿದಂತೆ ಹಲವಾರು ದೇವಸ್ಥಾನಗಳಿಗೆ ತೆರಳಿ, ದರ್ಶನ ಪಡೆಯುತ್ತಾರೆ. ನಂತರ ಶ್ರೀಶೈಲಂ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮೀಜಿಯಿಂದ ಆಶೀರ್ವಾದ ತೆಗೆದುಕೊಂಡು ತೆರಳುತ್ತಾರೆ ಎಂದು ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಮುಖ್ಯ ಅರ್ಚಕ ಗುರುಪಾದಯ್ಯಸ್ವಾಮಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು