ಮಂಗಳವಾರ, ಸೆಪ್ಟೆಂಬರ್ 22, 2020
26 °C

ಮಕ್ಕಳಿಗೆ ಪಠ್ಯ ಪುಸ್ತಕ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ವಿದ್ಯಾರ್ಥಿಗಳು ಪುಸ್ತಕಗಳನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು. ಅಂದಾಗ ಮಾತ್ರ ಶೈಕ್ಷಣಿಕ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಚಿರಂಜೀವಿ ಮೆಥೋಡಿಸ್ಟ್ ಸಂಸ್ಥೆ ಉಪಾಧ್ಯಕ್ಷ ಘನಸತ್ಯಾಮಿತ್ರ ಡಿ.ಎಸ್. ಅಯ್ಯರ ಅಭಿಪ್ರಾಯಪಟ್ಟರು.

ನಗರದ ಚಿರಂಜೀವಿ ಮೆಥೋಡಿಸ್ಟ್ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ 2019-20ನೇ ಸಾಲಿನ 8, 9, 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಉಚಿತ ಪಠ್ಯ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪುಸ್ತಕಗಳ ಬಳಕೆ ಹಾಗೂ ರಕ್ಷಣೆ ಅತಿ ಮುಖ್ಯವಾಗಿದೆ. ಅವುಗಳು ಟಿಪ್ಪಣೆ ಮಾಡಿಕೊಳ್ಳಲು ಸೇರಿದಂತೆ ವಿವಿಧ ವಿಷಯಗಳನ್ನು ಪುನರ್‌ ಮನನ ಮಾಡುವಲ್ಲಿ ನೆರವು ನೀಡುತ್ತವೆ. ಈ ದಿಸೆಯಲ್ಲಿ ಮಕ್ಕಳಿಗೆ ಆರ್ಥಿಕ ತೊಂದರೆ ಆಗದಂತೆ ಶಿಕ್ಷಣ ಪಡೆಯುವಲ್ಲಿ ಸರ್ಕಾರ ಉಚಿತ ಪುಸ್ತಕಗಳನ್ನು ವಿತರಣೆ ಮಾಡುತ್ತಿವುದು ಉತ್ತಮ ಬೆಳವಣಿಗೆಯಾಗಿದೆ. ಇದರ ಸರಿಯಾದ ಸದುಪಯೋಗ ಮಕ್ಕಳಿಂದಾಗಬೇಕು ಎಂದು ಕಿವಿಮಾತು ಹೇಳಿದರು.

ಮುಖ್ಯಶಿಕ್ಷಕ ಜಯಪಾಲ ಮಾತನಾಡಿ, ದಾಖಲಾತಿ ಸೇರಿದಂತೆ ಹಾಜರಾತಿ ಅತಿ ಮುಖ್ಯವಾಗಿದೆ. ಇದಕ್ಕಾಗಿ ಶಿಕ್ಷಣ ಇಲಾಖೆ ಅನ್ನಭಾಗ್ಯ, ಕ್ಷೀರ ಭಾಗ್ಯ ಸೇರಿ ವಿವಿಧ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ. ಇವುಗಳ ಬಳಕೆಯೊಂದಿಗೆ ಗುಣಾತ್ಮಕ ಶಿಕ್ಷಣ ಪಡೆಯುವಲ್ಲಿ ಪ್ರಯತ್ನ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ ಸಿಬ್ಬಂದಿ ವರ್ಗದವರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.