ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯರಗೋಳ | ವಿತರಣೆಯಾಗದ ಪಠ್ಯಪುಸ್ತಕ: ಜೆರಾಕ್ಸ್ ಪ್ರತಿಗಳಿಂದ ಬೋಧನೆ

Published 7 ಸೆಪ್ಟೆಂಬರ್ 2023, 16:03 IST
Last Updated 7 ಸೆಪ್ಟೆಂಬರ್ 2023, 16:03 IST
ಅಕ್ಷರ ಗಾತ್ರ

ಯರಗೋಳ: ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳು ವಿತರಣೆಯಾಗದ ಕಾರಣ ವಿದ್ಯಾರ್ಥಿಗಳಿಗೆ ಜೆರಾಕ್ಸ್ ಪ್ರತಿಗಳನ್ನು ನೀಡಿ ಬೋಧನೆ ಮಾಡುತ್ತಿರುವ ಚಿತ್ರ ಮತ್ತು ವಿಡಿಯೊ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

5ನೇ ತರಗತಿ ವಿದ್ಯಾರ್ಥಿಗಳು ಕೈಯಲ್ಲಿ ಜೆರಾಕ್ಸ್ ಪ್ರತಿಗಳನ್ನು ಹಿಡಿದು ಕಲಿಯುತ್ತಿದ್ದಾರೆ. ಈ ಕುರಿತು ವಿದ್ಯಾರ್ಥಿಗಳಲ್ಲಿ ವಿಚಾರಿಸಿದಾಗ ನಮಗೆ ಕನ್ನಡ ಪುಸ್ತಕ ಮಾತ್ರ ವಿತರಿಸಿದ್ದಾರೆ' ಎಂದು ಹೇಳಿದ್ದಾರೆ. ಶಾಲೆ ಪ್ರಾರಂಭವಾಗಿ 3 ತಿಂಗಳಾದರೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆಯಾಗದಿರುವುದು ನೋವಿನ ಸಂಗತಿಯಾಗಿದೆ' ಎಂದು ಗ್ರಾಮದ ಯುವಕ ಸಾಬಣ್ಣ ಬಾನರ ‘ಪ್ರಜಾವಾಣಿ’ಗೆ ತಿಳಿಸಿದರು.

‘ಶೈಕ್ಷಣಿಕ ವರ್ಷ ಆರಂಭವಾಗಿ 4 ತಿಂಗಳಾದರೂ ಪಠ್ಯಪುಸ್ತಕ ವಿತರಣೆಯಾಗದಿರುವುದು ನಾಚಿಕೆಗೇಡಿನ ವಿಷಯ. ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣ ಪಡೆಯುವುದಾದರೆ ಹೇಗೆ? ಎಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ನಾಗರಾಜ್ ಗಮಗ ಪ್ರಶ್ನಿಸಿದರು.

ಈ ಕುರಿತು 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ್ ಪೂಜಾರಿ, ಬಹುತೇಕ ಶಾಲೆಗಳಿಗೆ‘ಪುಸ್ತಕಗಳನ್ನು ವಿತರಿಸಲಾಗಿದ್ದು, ಯಾವ ಶಾಲೆಗಳಿಗೆ ವಿತರಣೆ ಆಗಿಲ್ಲ ಎಂಬುದರ ಕುರಿತು  ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT