ಶುಕ್ರವಾರ, ಮಾರ್ಚ್ 31, 2023
22 °C

ಯಾದಗಿರಿಯಿಂದ ಸಿದ್ದರಾಮಯ್ಯ ಸ್ಪರ್ಧಿಸಿದರೆ ₹ 1 ಕೋಟಿ: ತಾ. ಪಂ ಮಾಜಿ ಸದಸ್ಯ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಯಾದಗಿರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದರೆ ನನ್ನ ಆಸ್ತಿ ಮಾರಿ ₹1 ಕೋಟಿ ನೀಡುವೆ’ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಚಂದ್ರರಾಯ ನಾಗರಾಳ ಹುಲಕಲ್ ಹೇಳಿದರು.

‘ನಾನು ಬಿಜೆಪಿ ಕಾರ್ಯಕರ್ತನಾಗಿದ್ದರೂ ಪಕ್ಷ ತೊರೆದು ಕಾಂಗ್ರೆಸ್‌ ಸೇರುವೆ. ಸಿದ್ದರಾಮಯ್ಯ ಅವರ ಚುನಾವಣಾ ಖರ್ಚು ನಿಭಾಯಿಸುವೆ. ಅವರು ಸ್ಪರ್ಧಿಸಿದರೆ, ಯಾದಗಿರಿ ಸೇರಿ ಇಡೀ ಜಿಲ್ಲೆ ಅಭಿವೃದ್ಧಿಯಾಗುವುದು’ ಎಂದು ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು