ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆ; ಹರ್ಷ

Last Updated 29 ಸೆಪ್ಟೆಂಬರ್ 2020, 16:59 IST
ಅಕ್ಷರ ಗಾತ್ರ

ಸುರಪುರ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದಲ್ಲಿ ನೂತನವಾಗಿ ಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದೇಶ ಹೊರಡಿಸಿದ್ದಕ್ಕೆ ಕರ್ನಾಟಕ ರಾಜ್ಯ ಗೊಲ್ಲ (ಯಾದವ) ಸಂಘದ ರಾಜ್ಯ ಉಪಾಧ್ಯಕ್ಷ ವಿಠಲ್ ಯಾದವ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಮಾಜದ ಧುರೀಣರಾದ, ಶಾಸಕಿ ಪೂರ್ಣಿಮಾ ಶ್ರೀನಿವಾಸ, ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಿ.ಟಿ.ಶ್ರೀನಿವಾಸ ಮತ್ತು ರಾಜ್ಯದ ಸಮಾಜದ ಪ್ರಮುಖರು, ‘ಗೊಲ್ಲ ಮತ್ತು ಅದಕ್ಕೆ ಸಮಾನಾಂತರವಾದ 28 ಜಾತಿಗಳಿದ್ದು ಎಲ್ಲವೂ ಗೊಲ್ಲ ಜಾತಿಯಲ್ಲೇ ಇರುತ್ತವೆ. ಹೀಗಾಗಿ ಕಾಡುಗೊಲ್ಲ ಅಭಿವೃದ್ಧಿ ನಿಗಮವನ್ನು ಪ್ರತ್ಯೇಕವಾಗಿ ಸ್ಥಾಪನೆ ಮಾಡುವುದರಿಂದ ಜನಾಂಗವನ್ನು ವಿಂಗಡನೆ ಮಾಡಿದಂತಾಗುತ್ತದೆ. ಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸಿದಲ್ಲಿ ಅನುಕೂಲವಾಗುತ್ತದೆ’ ಎಂದು ಮುಖ್ಯಮಂತ್ರಿಗಳಿಗೆಮನವರಿಕೆ ಮಾಡಿಕೊಟ್ಟರು. ನಂತರ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಹಿಂದೆ ಆಯ–ವ್ಯಯ ಭಾಷಣದಲ್ಲಿ ಘೋಷಿಸಿರುವಂತೆ ಗೊಲ್ಲ ಅಭಿವೃದ್ದಿ ನಿಗಮ ಸ್ಥಾಪನೆಗೆ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಟಿಪ್ಪಣಿ ಹೊರಡಿಸಿದರು.

ಎಲ್ಲಾ ಗೊಲ್ಲ ಸಮಾಜವನ್ನು ಒಂದೇ ಗುಂಪಿನಡಿ ಪರಿಗಣಿಸಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದೇಶಿಸಿರುವುದಕ್ಕೆ ರಾಜ್ಯದ ಸಮಸ್ತ ಗೊಲ್ಲ (ಯಾದವ್) ಹಾಗೂ ಸಮಾನಾಂತರ ಜಾತಿಗಳ ವತಿಯಿಂದ ಕೃತಜ್ಞತೆ ಸಲ್ಲಿಸುವುದಾಗಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT