ಗ್ರಾಮ ಪಂಚಾಯಿತಿ ಸ್ಥಾನ ಅವಿರೋಧ ಆಯ್ಕೆಗೆ ₹1 ಲಕ್ಷ ಕಾಣಿಕೆಯ ಷರತ್ತು
ಶಹಾಪುರ: ತಾಲ್ಲೂಕಿನ ಹತ್ತಿಗೂಡೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಂಗಂಡಿ ಗ್ರಾಮದ ನಾಲ್ಕು ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಸಿ, ಆಯ್ಕೆಯಾದವರು ಊರಿನ ದೇವಸ್ಥಾನ ಜೀರ್ಣೋದ್ಧಾರಕ್ಕೆ ತಲಾ ₹1ಲಕ್ಷ ಕಾಣಿಕೆ ನೀಡಬೇಕು ಎಂಬ ನಿರ್ಧಾರವನ್ನು ಗ್ರಾಮದ ಮುಖಂಡರು ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ಬೆಂಬಲಿಗರಿಗೆ ಮೂರು ಸ್ಥಾನ ಹಾಗೂ ಬಿಜೆಪಿ ಬೆಂಬಲಿಗರಿಗೆ ಒಂದು ಸ್ಥಾನ ಹಂಚಿಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
‘ಅವಿರೋಧ ಆಯ್ಕೆಯ ನೆಪದಲ್ಲಿ ₹1ಲಕ್ಷ ಹಣ ಪಡೆದುಕೊಳ್ಳುವುದನ್ನು ತಕ್ಷಣ ನಿಲ್ಲಿಸಬೇಕು ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಪರಿಶಿಷ್ಟ ಜಾತಿಯ ಮುಖಂಡ ಶರಣುರಡ್ಡಿ ಹತ್ತಿಗೂಡೂರ ಅವರು ತಾಲ್ಲೂಕು ಚುನಾವಣೆ ಅಧಿಕಾರಿಗೆ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.