ಗುರುವಾರ , ಜುಲೈ 29, 2021
21 °C

ಯಾದಗಿರಿ | ರಾಜ್ಯದಲ್ಲಿಯೇ ಅತೀ ಹೆಚ್ಚು ಕೋವಿಡ್ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ಕಳೆದ 10 ದಿನಗಳಲ್ಲಿ 7,297 ಕೋವಿಡ್ ಪರೀಕ್ಷೆಗಳನ್ನು ಮಾಡಲಾಗಿದ್ದು, ಇದು ರಾಜ್ಯದಲ್ಲಿಯೇ ಅತೀ ಹೆಚ್ಚು ಟೆಸ್ಟ್‌ಗಳನ್ನು ಕೈಗೊಂಡ ಜಿಲ್ಲೆಯಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ತಿಳಿಸಿದ್ದಾರೆ.

ಕಲಬುರ್ಗಿಯಲ್ಲಿ 4,843, ಉಡುಪಿಯಲ್ಲಿ 4,219, ವಿಜಯಪುರದಲ್ಲಿ 3,839, ಬೀದರ್‌ಲ್ಲಿ‌ 3,559 ಪರೀಕ್ಷೆ ಮಾಡಲಾಗಿದೆ. ಆದರೆ, ಯಾದಗಿರಿ ಜಿಲ್ಲೆಯ 7 ಸಾವಿರಕ್ಕೂ ಕೋವಿಡ್‌ ಪರೀಕ್ಷೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಜ್ವರದ ಲಕ್ಷಣ ಹಾಗೂ ತೀವ್ರ ಉಸಿರಾಟದ ಸೋಂಕಿನಂಥ  ಲಕ್ಷಣಗಳನ್ನು ಹೊಂದಿರುವ ಸಾರ್ವಜನಿಕರು ಕಡ್ಡಾಯವಾಗಿ ಆರೋಗ್ಯ ತಂಡವನ್ನು ಸಂಪರ್ಕಿಸಿ ಗಂಟಲು ದ್ರವವನ್ನು ಪರೀಕ್ಷೆಗೆ ನೀಡಬೇಕು. ಸಾರ್ವಜನಿಕರು ಸಾರ್ವಜನಿಕ ಸ್ಥಳದಲ್ಲಿ ಕಡ್ಡಾಯವಾಗಿ ಮುಖಗವಸು ಧರಿಸಬೇಕು. ಅಂತರ ಕಾಪಾಡಿಕೊಳ್ಳಬೇಕು ಮತ್ತು ಸ್ಯಾನಿಟೈಸರ್ ಬಳಸಬೇಕು. ಪ್ರತಿಯೊಬ್ಬರೂ ಕಡ್ಡಾಯವಾಗಿ ಆರೋಗ್ಯ ಸೇತು ಆ್ಯಪ್‌ ಅನ್ನು ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.