ಬುಧವಾರ, ಆಗಸ್ಟ್ 4, 2021
21 °C
ನಗರಾಭಿವೃದ್ಧಿ ಪ್ರಾಧಿಕಾರದ ಪದಾಧಿಕಾರಿಗಳಿಗೆ ಸನ್ಮಾನ

ಜನರ ಸಮಸ್ಯೆ ಬಗೆಹರಿಸಲು ಶಾಸಕರ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಹಾಗೂ ಸದಸ್ಯರನ್ನು ನಗರ ಬಿಜೆಪಿ ಮಂಡಲ ವತಿಯಿಂದ ಸೋಮವಾರ ಸನ್ಮಾನಿಸಲಾಯಿತು.

ಶಾಸಕ ವೆಂಕಟರೆಡ್ಡಿ ಮುದ್ನಾಳ ಮಾತನಾಡಿ, ‘ನಗರದ ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸಿ. ನಾನು ನಿಮ್ಮ ಜೊತೆಗೂಡಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ‘ ಎಂದರು.

ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬಸವರಾಜ ಚಂಡರಕಿ, ಸದಸ್ಯರಾದ ರುದ್ರಗೌಡ ಪಾಟೀಲ, ಶಿವಕಾಂತಮ್ಮ ವಡ್ನಳ್ಳಿ, ಸುಭಾಶ ಮಾಳಿಕೇರಿ, ಮಂಜುನಾಥ ಜಡಿ, ಖಂಡಪ್ಪ ದಾಸನ, ನಗರ ಮಂಡಲ ಬಿಜೆಪಿ ಅಧ್ಯಕ್ಷ ಸುರೇಶ ಅಂಬಿಗೇರ, ಶರಣು ಆಶನಾಳ, ಹಣಮಂತ ವಲ್ಯಾಪುರೆ, ನಗರಸಭೆ ಸದಸ್ಯರಾದ ಹಣಮಂತ ಇಟಗಿ, ಸ್ವಾಮಿದೇವ ದಾಸನಕೇರಿ, ವಿಲಾಸ ಪಾಟೀಲ, ಸುರೇಶ ಮಡ್ಡಿ, ಮಾರುತಿ ಕಲಾಲ, ಮರೆಪ್ಪ ವಡಿಗೇರಿ, ರವಿ ಬಾಪುರೆ, ಚಂದ್ರಕಾಂತ ಮಡ್ಡಿ, ಮಶೆಪ್ಪ, ಬಸವರಾಜ ನಾಯಕ, ಸುನೀತಾ ಚವ್ಹಾಣ, ಬಿಜೆಪಿ ಕಾರ್ಯಕರ್ತರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.