ಮಂಗಳವಾರ, ಅಕ್ಟೋಬರ್ 26, 2021
20 °C
ಜಿಲ್ಲೆಯ ವಿವಿಧೆಡೆ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಸ್ಮರಣೆ; ಭಾವಚಿತ್ರಕ್ಕೆ ಪುಷ್ಪಾರ್ಷನೆ

ಯಾದಗಿರಿ ಜಿಲ್ಲೆಯಾದ್ಯಂತ ಅಹಿಂಸೆಯ ಪ್ರತಿಪಾದಕನ ಸ್ಮರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ನಗರ ಸೇರಿದಂತೆ ಜಿಲ್ಲಾದ್ಯಂತ ಶನಿವಾರ ಮಹಾತ್ಮ ಗಾಂಧಿ ಮತ್ತು ಲಾಲ್‌ ಬಹದ್ದೂರ್‌ ಶಾಸ್ತ್ರಿ ಜಯಂತಿ  ಆಚರಿಸಲಾಯಿತು.

ಗಾಂಧೀಜಿ ಅವರ 153, ಶಾಸ್ತ್ರೀಜಿ ಅವರ 117 ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚಾನೆ ಮಾಡುವ ಮೂಲಕ ನಮನ ಸಲ್ಲಿಸಲಾಯಿತು.ದೇಶದ ಇಬ್ಬರು ಮಹನೀಯರ ಆದರ್ಶಗಳನ್ನು ಪಾಲಿಸಲು ಗಣ್ಯರು ಸಲಹೆ ನೀಡಿದರು.

ಜಿಲ್ಲಾಡಳಿತದಿಂದ ಜಯಂತಿ: ಜಿಲ್ಲಾಡಳಿತ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಮಾಜಿ‌ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮ ಶನಿವಾರ ಜಿಲ್ಲಾಡಳಿತ ಭವನದಲ್ಲಿ ಜರುಗಿತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ‌ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ವೆಂಕಟರೆಡ್ಡಿ ಮುದ್ನಾಳ, ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ, ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ನಗರಸಭೆ ಅಧ್ಯಕ್ಷ ವಿಲಾಸ್ ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಚಂಡ್ರಕಿ, ವಾರ್ತಾ ಇಲಾಖೆ ಹಿರಿಯ ಸಹಾಯಕ‌ ನಿರ್ದೇಶಕ ಬಿ.ಎ. ಖಾದರ್ ಶಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ ಇದ್ದರು.

ಇದಕ್ಕೂ ಮೊದಲು ಬಸವರಾಜ ಬಂಟನೂರು ತಂಡದಿಂದ ಗಾಂಧಿಜೀ ಭಜನೆಗಳ ಗಾಯನ ನಡೆಯಿತು.

ಬಿಜೆಪಿ ಕಾರ್ಯಾಲಯ: ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಅವರ ಜಯಂತಿ ಮತ್ತು ಲಾಲ್ ಬಹದ್ದೂರ ಶಾಸ್ತ್ರಿ ಅವರ ಜಯಂತಿ ಏರ್ಪಡಿಸಲಾಗಿತ್ತು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶರಣಭೂಪಾಲರಡ್ಡಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಮಹಾತ್ಮ ಗಾಂಧೀಜಿ ಅವರ ಆದರ್ಶ ಅಳವಡಿಸಿಕೊಂಡು ಕಾರ್ಯ ನಡೆಸುತ್ತಿದೆ ಎಂದು ಅಭಿಪ್ರಾಯಪಟ್ಟರು.

ಸ್ವಚ್ಛ ಭಾರತ್, ಗ್ರಾಮ ಸಡಕ್‌ನಂಥ ಉತ್ತಮ ಯೋಜನೆಗಳು ಅನುಷ್ಠಾನದ ಮೂಲಕ ಈಗಿನ ಕೇಂದ್ರ ಸರ್ಕಾರ ಮಹಾತ್ಮ ಗಾಂಧೀಜಿ ಅವರ ಚಿಂತನೆಗಳನ್ನು ಅಳವಡಿಸಿಕೊಂಡಿದೆ. ಅಲ್ಲದೇ ಸ್ವಾಮಿ ವಿವೇಕಾನಂದರ ‘ಭಾರತ ವಿಶ್ವಗುರು’ ಎಂಬ ಮಹಾನ್ ಪರಿಕಲ್ಪನೆಯನ್ನು ಜಾರಿಗೊಳಿಸಲು ಶ್ರಮಿಸುತ್ತಿದೆ ಎಂದು ಹೇಳಿದರು.

ಶಾಸಕ ವೆಂಕಟರಡ್ಡಿ ಮುದ್ನಾಳ ಮಾತನಾಡಿ, ದೇಶಕ್ಕಾಗಿ ವಾರದಲ್ಲಿ ಎಲ್ಲ ದಿನಗಳು ಒಂದು ಹೊತ್ತಿನ ಊಟ ಬಿಡಿ ಎಂದು ಲಾಲ್ ಬಹದ್ದೂರ್‌ ಶಾಸ್ತ್ರಿಯವರು ಕರೆ ನೀಡಿದ್ದರು. ಅವರು ದೇಶದ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನವನ್ನು ಹೊಂದಿದ್ದರು ಎಂದು ಹೇಳಿದರು.

ಮಾಜಿ ಶಾಸಕ ಡಾ.ವಿರಬಸವಂತರಡ್ಡಿ ಮುದ್ನಾಳ, ರಾಜ್ಯ ಮಾಜಿ ಉಪಾಧ್ಯಕ್ಷೆ ನಾಗರತ್ನ ಕುಪ್ಪಿ, ಜಿಲ್ಲಾ ಉಪಾಧ್ಯಕ್ಷ ಚನ್ನಾರಡ್ಡಿ ಬಿಳ್ಹಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದೇವೇಂದ್ರನಾಥ ನಾದ, ವೆಂಕಟರಡ್ಡಿ ಅಬ್ಬೆತುಮಕೂರ, ಮುಖಂಡರಾದ ಖಂಡಪ್ಪ ದಾಸನ, ಶರಣಗೌಡ ಬಾಡಿಯಾಳ, ಪ್ರಭುಗೌಡ ನಾಯ್ಕಲ್, ಯುಡಾ ಅಧ್ಯಕ್ಷ ಬಸವರಾಜ ಚಂಡ್ರಕಿ, ನಗರಸಭೆ ಅಧ್ಯಕ್ಷ ವಿಲಾಸ್ ಪಾಟೀಲ, ನಗರಸಭೆ ಉಪಾಧ್ಯಕ್ಷೆ ಪ್ರಭಾವತಿ ಮಾರುತಿ ಕಲಾಲ್, ನಗರ ಮಂಡಲ ಅಧ್ಯಕ್ಷ ಸುರೇಶ ಅಂಬಿಗೇರ, ನಗರಸಭಾ ಸದಸ್ಯರಾದ ಹಣಮಂತ ಇಟಗಿ, ಸ್ವಾಮಿದೇವ ದಾಸನಕೇರಿ, ಗೋಪಾಲ ದಾಸನಕೇರಿ, ಯುಡ ಸದಸ್ಯರಾದ ರುದ್ರಗೌಡ ಪಾಟೀಲ, ಸುಭಾಸ್ ಮಾಳಿಕೇರಿ, ಇಮಾನ್ವೆಲ್ ಜಿಮ್ಮಿ, ರವಿ ಮುದ್ನಾಳ ಸೇರಿದಂತೆ ಬಿಜೆಪಿಯ ಕಾರ್ಯಕರ್ತರು ಇದ್ದರು.

ಜೆಡಿಎಸ್‌ ಕಾರ್ಯಾಲಯ: ನಗರದ ಜಿಲ್ಲಾ ಜೆಡಿಎಸ್ ಕಾರ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಮಹಾತ್ಮ ಗಾಂಧಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಣೆ ಮಾಡಲಾಯಿತು.

ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಹನುಮೇಗೌಡ ಬೀರನಕಲ್ ಮಾತನಾಡಿ, ಮಹಾತ್ಮರ ತ್ವಾದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ವಿಶ್ವನಾಥ ಸಿರವಾರ, ಚೆನ್ನಪ್ಪಗೌಡ ಮೋಸಂಬಿ, ಮಹ್ಮದ್ ರಫಿ, ಉದಯಕುಮಾರ, ಬಸವರಾಜ, ಸಿದ್ದು, ಶರಣು ಪಡಶೆಟ್ಟಿ, ರಾಜಶೇಖರ ದೊರೆ, ಮಹೇಶ ಬಿರನೂರ, ವೀರಭದ್ರಪ್ಪ, ರಿಯಾಜ್ ವಾಹಿದ್ ಖುರೇಶಿ, ನಿಜಾಮುದ್ದೀನ್ ಇದ್ದರು.

ಜಯ ಕರ್ನಾಟಕ ಕಾರ್ಯಾಲಯ: ನಗರದ ಜಯಕರ್ನಾಟಕ ಸಂಘಟನೆ ಕಾರ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ, ಲಾಲ್‌ ಬಹದ್ದೂರು ಶಾಸ್ತ್ರೀ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿದ ಜಿಲ್ಲಾಧ್ಯಕ್ಷ ಬಿ.ಎನ್. ವಿಶ್ವನಾಥ ನಾಯಕ ಮಾತನಾಡಿ, ಇಬ್ಬರು ನಾಯಕರುಗಳು ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರಿಂದಾಗಿ ದೇಶದ ಘನತೆ ಹೆಚ್ಚಿದೆ ಎಂದು ಹೇಳಿದರು.

ರಾಜ್ಯ ಕಾರ್ಯದರ್ಶಿ ವಿಜಯ ಕುಮಾರ ಮೊಗದಂಪುರ, ಶಿವರಾಜ ಗುತ್ತೇದಾರ, ದಶರಥ ಶೆಟ್ಟಿಕೇರಾ, ರಿಯಾಜ್ ಪಟೇಲ್, ಮಾರುತಿ ಮುದ್ನಾಳ, ಬಸ್ಸು ಪೂಜಾರಿ, ಮೀನಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು